ಬರ ಪರಿಹಾರ ಸಾಲಕ್ಕೆ ಹೊಂದಾಣಿಕೆ ಬೇಡ, ಡಿಸಿ ಆದೇಶ

Published : May 16, 2024, 09:26 AM IST
Gratuity money

ಸಾರಾಂಶ

ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.

ಧಾರವಾಡ :  ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.

 ಧಾರವಾಡ ಜಿಲ್ಲೆಯ ರೈತ ಬ್ಯಾಂಕ್‌ ಖಾತೆಗಳಿಗೆ ಬರ ಪರಿಹಾರ ಮೊತ್ತವು ಸರ್ಕಾರದಿಂದ ನೆರವಾಗಿ ಡಿಬಿಟಿ ಮೂಲಕ ಸಂದಾಯವಾಗುತ್ತದೆ. ಈ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಲ್ಲ ಬ್ಯಾಂಕ್‌ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಆದೇಶಿಸಿದ್ದಾರೆ.

PREV
Stay updated with the latest news, developments and happenings from Dharwad district (ಧಾರವಾಡ ಸುದ್ದಿ) — including politics, local governance, civic issues, education, crime, social events and more. All in Kannada, from Kannada Prabha.

Recommended Stories

ಕೈಗಾರಿಕಾ ವಸ್ತು ಪ್ರದರ್ಶನ ಇನ್‌ಕಾಮೆಕ್ಸ್‌ಗೆ ತೆರೆ
ಪ್ರತ್ಯೇಕ ಪಾಲಿಕೆ ನಿರಾಕರಿಸುವ ಗೊತ್ತುವಳಿಗೆ ತೀವ್ರ ವಿರೋಧ