ಕನ್ನಡಪ್ರಭ ವಾರ್ತೆ ಬೆಳಗಾವಿ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಲಗಾ-ಮಚ್ಚೆ ಮಾರ್ಗವಾಗಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂ-ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಖಾನಾಪುರ-ರಾಮನಗರ ರೈಲ್ವೆ ಮಾರ್ಗದಲ್ಲಿ ಸಣ್ಣ ಪುಟ್ಟ ಸೇತುವೆಗಳಿದ್ದು, ಮೇಲ್ಸೇತುವೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು ಎಂದು ತಿಳಿಸಿದರು.
ಬಾಕಿ ಉಳಿದಿರುವ ಭೂಸ್ವಾಧೀನವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಬಳಿಕ ಏಪ್ರಿಲ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ೨೪/೭ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ವಿಳಂಬವಾಗದಂತೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗಳೊಳ್ಳಬೇಕು ಎಂದು ಸೂಚಿಸಿದರು.ಖಾನಾಪುರ ತಾಲೂಕಿನ ಕುಸುಮಳ್ಳಿ ಸೇತುವೆ ನಿರ್ಮಾಣಕ್ಕೆ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸಲಾಗಿದೆ ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಬೆಳಗಾವಿ ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಜಮೀನುಗಳನ್ನು ಸಮೀಕ್ಷೆ ನಡೆಸಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ತಕರಾರು ಇರುವ ಊರುಗಳಿಗೆ ನೋಟಿಸ್ ಜಾರಿ ಮಾಡಿ ಸ್ಥಳೀಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು. ಕೆಲವು ರೈತರು ನೋಟಿಸ್ ಜಾರಿ ಮಾಡಿದರೂ ನೋಟಿಸ್ ಸ್ವೀಕರಿಸುತ್ತಿಲ್ಲ. ಹಾಗಾಗಿ ಸಮೀಕ್ಷೆ ಸಂದರ್ಭಲ್ಲಿ ಅಡತಡೆಗಳು ಉಂಟಾಗುತ್ತಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಳಗಾವಿ ವಿಶೇಷ ಭೂ ಸ್ವಾಧೀನಾಧಿಕಾರಿ ಬಲರಾಮ ಚವ್ಹಾಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಾಗಲಕೋಟೆ ಭೂ ವಿಶೇಷ ಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.