ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ್ದ ಧೀಮಂತ ಬಸವಣ್ಣ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

KannadaprabhaNewsNetwork |  
Published : May 01, 2025, 12:48 AM IST
ಬಸವ ಜಯಂತಿ ಆಚರಿಸಲಾಯಿತು  | Kannada Prabha

ಸಾರಾಂಶ

ವಿಶ್ವ ಕಂಡ ಶ್ರೇಷ್ಠ ಮೇದಾವಿ ಬಸವಣ್ಣನವರು ಪ್ರಪಂಚಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಕಾರವಾರ: ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಬುಧವಾರ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಉದ್ಘಾಟಿಸಿದರು.ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ವಿಶ್ವ ಕಂಡ ಶ್ರೇಷ್ಠ ಮೇದಾವಿ ಬಸವಣ್ಣನವರು ಪ್ರಪಂಚಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಸಾಹಿತ್ಯ ಕ್ಷೇತ್ರದಲ್ಲಿ ರಾಯಾಭಾರಿಯಾಗದೇ, ಸಮಾಜ ಸುಧಾರಣೆ, ಧರ್ಮದಲ್ಲಿರುವ ಅನಾಚಾರಗಳು ಸೇರಿದಂತೆ ಸಮಾಜದಲ್ಲಿರುವ ಸಂಪ್ರದಾಯಗಳು, ಅನಿಷ್ಟ ಪದ್ಧತಿಗಳ ವಿರುದ್ಧ ನಿರ್ಭಯವಾಗಿ ವಚನ ಸಾಹಿತ್ಯದ ಮೂಲಕ ಪ್ರತಿಪಾದಿಸಿದರು ಎಂದು ಹೇಳಿದರು.

ನುಡಿದಂತೆ ನಡೆಯಬೇಕು, ನಡೆದಂತೆ ನುಡಿಯಬೇಕು. ಇಲ್ಲವಾದಲ್ಲಿ ದೇವರು ಮೆಚ್ಚುವುದಿಲ್ಲ. ಆತ್ಮಶುದ್ಧಿಯೇ ಮಹತ್ವದ್ದು ಎಂದು ತಮ್ಮ ವಚನಗಳಲ್ಲಿ ತಿಳಿಸಿದ್ದಾರೆ. ಬಸವಣ್ಣನವರ ವಚನಗಳನ್ನು ಮತ್ತು ತತ್ವಾರ್ದಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ತಮ್ಮ ವ್ಯಕ್ತಿತ್ವದ ಅಭಿವೃದ್ಧಿಗೆ ಹಾಗೂ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಲು ಸಹಕಾರಿಯಾಗಿಲಿದೆ. ಬುದ್ದ, ಬಸವ, ಗಾಂಧಿ, ಅಂಬೇಡ್ಕರ್‌ ಅವರ ತತ್ವಾದರ್ಶಗಳು ನಮ್ಮಗೆಲ್ಲ ದಾರಿದೀಪವಾಗಿವೆ ಎಂದರು.

ಹಿರಿಯ ಪತ್ರಕರ್ತ ನಾಗರಾಜ ಹರಪನಹಳ್ಳಿ ಮಾತನಾಡಿ, ಬಸವಣ್ಣ ಅವರು 12ನೇ ಶತಮಾನದಲ್ಲಿ ಕನ್ನಡ ನಾಡಿನಲ್ಲಿ ಸಾಮಾಜಿಕ ಹಾಗೂ ಧಾರ್ಮಿಕವಾಗಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ದೊಡ್ಡ ಕ್ರಾಂತಿಯನ್ನು ಮಾಡಿದವರು ಎಂದರು.

ಶಿಕ್ಷಕ ಗಣೇಶ ಎನ್ ಬಿಷ್ಠಣ್ಣನವರ್, ಬಸವಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡಿ, ವಿಶ್ವ ಗುರು, ಜ್ಞಾನಜ್ಯೋತಿ ಬಸವಣ್ಣ ನಾಡಿಗೆ ಹೊಸ ನವ್ಯತೆಯನ್ನು ನೀಡಿ, ತಮ್ಮ ವಚನಗಳ ಮೂಲಕ ನಮ್ಮೆಲ್ಲರನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ ಎಂದರು.

ಪ್ರಮುಖರಾದ ರಾಜೀವ್ ಮಠದ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಲಾ ನಾಯ್ಕ ಸ್ವಾಗತಿಸಿದರು. ಶಿವಾಜಿ ವಿದ್ಯಾಮಂದಿರದ ಶಿಕ್ಷಕ ಮಹಾದೇವ ರಾಣೆ ನಿರೂಪಿಸಿ, ವಂದಿಸಿದರು.

PREV

Recommended Stories

ಹೆತ್ತವರ ಕನಸು ನನಸಾಗಿಸುವುದೇ ಮಕ್ಕಳ ಗುರಿಯಾಗಿರಲಿ: ಸಚಿವೆ ಹೆಬ್ಬಾಳ್ಕರ್
ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್