ಸಮುದಾಯದ ಸಮಸ್ಯೆ ಅರಿಯಲು ಸ್ಥಳೀಯ ಪರಿಸ್ಥಿತಿ ತಿಳಿಯಬೇಕು

KannadaprabhaNewsNetwork |  
Published : Sep 24, 2026, 03:15 AM IST
2 | Kannada Prabha

ಸಾರಾಂಶ

ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಹಾಗೂ ರಕ್ಷಣೆಯ ಕ್ಷೇತ್ರದಲ್ಲಿ ಆರ್‌.ಎಲ್‌.ಎಚ್‌.ಪಿ ಸಂಸ್ಥೆಯು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯ.

ಕನ್ನಡಪ್ರಭ ವಾರ್ತೆ ಮೈಸೂರುಸಮುದಾಯದ ಆರೋಗ್ಯ ಸಮಸ್ಯೆ ಅರ್ಥಮಾಡಿಕೊಳ್ಳಲು ಅದರ ಸಾಮಾಜಿಕ ರಚನೆ ಮತ್ತು ಸ್ಥಳೀಯ ಪರಿಸ್ಥಿತಿಯನ್ನು ಮೊದಲು ಅರಿಯಬೇಕು ಎಂದು ಪ್ರಾದೇಶಿಕ ಆಯುಕ್ತರ ಕಚೇರಿಯ ಹೆಚ್ಚುವರಿ ಆಯುಕ್ತ ಡಾ.ಪಿ. ಶಿವರಾಜು ಹೇಳಿದರು.ನಗರದ ಡಿಎಚ್‌ಒ ಕಚೇರಿ ಆವರಣದ ವೈದ್ಯರ ಭವನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ‘‘ಮಹಿಳೆ ಮತ್ತು ಶಿಶು ಆರೈಕೆ ಆರೋಗ್ಯ ಸೇವೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ, ಪೋಸ್ಟರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಹಾಗೂ ರಕ್ಷಣೆಯ ಕ್ಷೇತ್ರದಲ್ಲಿ ಆರ್‌.ಎಲ್‌.ಎಚ್‌.ಪಿ ಸಂಸ್ಥೆಯು ಕೈಗೊಳ್ಳುತ್ತಿರುವ ಕಾರ್ಯ ಶ್ಲಾಘನೀಯ. ಸಮುದಾಯ ಮಟ್ಟದಲ್ಲಿ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಪಾತ್ರ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಇಂತಹ ತರಬೇತಿ ಕಾರ್ಯಾಗಾರ ಆಯೋಜಿಸಿರುವುದು ಉಪಯುಕ್ತ ಎಂದು ಹೇಳಿದರು.ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ವೈದ್ಯರು, ನರ್ಸ್‌ ಗಳು ಹಾಗೂ ಇತರ ಆರೋಗ್ಯ ಸಿಬ್ಬಂದಿ ಸೇವಾ ಮನೋಭಾವ ಮತ್ತು ಸಮರ್ಪಣೆಯನ್ನು ಅವರು ಉಲ್ಲೇಖಿಸಿದರು.ಮೈಸೂರು ಜಿಲ್ಲೆಯನ್ನು ಆರೋಗ್ಯ ಕ್ಷೇತ್ರದಲ್ಲಿ ಮಾದರಿ ಜಿಲ್ಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮೋಹನ್‌ ಕುಮಾರ್‌ ಮಾತನಾಡಿ, ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವಲ್ಲಿ ಎಲ್ಲರೂ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು. ಹೆಣ್ಣು ಭ್ರೂಣಹತ್ಯೆಯಂತಹ ಪ್ರಕರಣಗಳ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯ ತೋರಬಾರದು ಎಂದು ತಿಳಿಸಿದರು.ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಸಂಬಂಧಿಸಿದ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಆರ್‌.ಎಲ್‌.ಎಚ್‌.ಪಿ ನಿರ್ದೇಶಕಿ ಸರಸ್ವತಿ, ಮಹಿಳೆಯರು ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಯನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ತಲುಪಿಸುವುದು ಕಾರ್ಯಾಗಾರದ ಪ್ರಮುಖ ಉದ್ದೇಶ ಎಂದು ತಿಳಿಸಿದರು.ಆರೋಗ್ಯ ಸಿಬ್ಬಂದಿಗೆ ಅಗತ್ಯ ಜ್ಞಾನ ಮತ್ತು ಕೌಶಲ್ಯ ಹೆಚ್ಚಿಸುವ ಮೂಲಕ ಸೇವೆಗಳ ಗುಣಮಟ್ಟ ಸುಧಾರಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದೆ ಎಂದು ಹೇಳಿದರು.ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಮಹಮ್ಮದ್ ಶಿರಾಜ್ ಅಹಮದ್‌ ಅವರು ಎಚ್‌.ಪಿ.ವಿ ಲಸಿಕೆಯ ಮಹತ್ವ, ಕಿಶೋರಾವಸ್ಥೆಯ ಗರ್ಭಧಾರಣೆ ಹಾಗೂ ಬಾಲ್ಯ ವಿವಾಹದ ಕುರಿತು ವಿವರಿಸಿದರು.ಕಾರ್ಯಾಗಾರದಲ್ಲಿ ಮೈಸೂರು ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳಿಂದ 100ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ/ ಸಿಬ್ಬಂದಿ ಹಾಗೂ ಆರ್‌ಎಲ್‌ಎಚ್‌.ಪಿ ಸಿಬ್ಬಂದಿ ಇದ್ದರು.ಸಂಯೋಜಕ ಶಶಿಕುಮಾರ್ ನಿರೂಪಿಸಿದರು. ಸಂಸ್ಥೆಯ ಕದ್ದಿಜ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಗ್ಗಟ್ಟು ಇದ್ದಲ್ಲಿ ಸವಲತ್ತು ಪಡೆಯಲು ಸಾಧ್ಯ
ನಿಜವಾದ ಯಶಸ್ಸಿಗೆ ಜ್ಞಾನದಷ್ಟೇ ಜೀವನ ಮೌಲ್ಯಗಳು ಮುಖ್ಯ