ಸಾಮರಸ್ಯದ ಬಕ್ರೀದ್ ಆಚರಣೆಗೆ ಡೀಸಿ ಸೂಚನೆ

KannadaprabhaNewsNetwork |  
Published : Jun 15, 2024, 01:06 AM IST
14ಸಿಎಚ್‌ಎನ್‌54ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ನಡೆಸಿದರು. | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರು ನಡೆಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಮುಂಬರಲಿರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಆಚರಿಸುವಂತಾಗಲೆಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸೌಹಾರ್ಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಕ್ರೀದ್ ಹಬ್ಬವನ್ನು ಈ ಹಿಂದಿನ ವರ್ಷಗಳಲ್ಲಿ ಆಚರಿಸುತ್ತಿದ್ದ ರೀತಿಯಲ್ಲಿಯೇ ಈ ಬಾರಿಯೂ ಶಾಂತಿ, ಸೌಹಾರ್ದತೆಯಿಂದ ಆಚರಿಸಬೇಕು. ಹಬ್ಬಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಿರುವ ಸೌಲಭ್ಯಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗುವುದು ಎಂದರು.

ನಗರ, ಪಟ್ಟಣ ಸೇರಿದಂತೆ ವಿವಿಧೆಡೆ ಹಬ್ಬದ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಕ್ರಮವಹಿಸಬೇಕು. ಸ್ವಚ್ಚತೆ ಕಾರ್ಯವನ್ನು ಆಗಿದ್ದಾಂಗೆ ಕೈಗೊಳ್ಳಬೇಕು. ನಿರಂತರ ವಿದ್ಯುತ್ ಪೂರೈಸಲು ಸಂಬಂಧಪಟ್ಟ ಇಲಾಖೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಮುದಾಯದ ಮುಖಂಡರು ಮಾತನಾಡಿ, ಪ್ರಾರ್ಥನೆಗೆ ಹೆಚ್ಚಿನ ಬಾಂಧವರು ಸೇರುವುದರಿಂದ ಉಂಟಾಗಬಹುದಾದ ಸಂಚಾರ ದಟ್ಟಣೆ ಸುಗಮಗೊಳಿಸಲು ಏಕಮುಖ ಸಂಚಾರ ಇರಬೇಕು. ಮಾಂಸದ ತ್ಯಾಜ್ಯ ವಿಲೇವಾರಿಗೆ ಸೂಕ್ತ ಏರ್ಪಾಡು ಮಾಡಬೇಕು. ಹಬ್ಬದ ಹಿನ್ನೆಲೆಯಲ್ಲಿ ಕುಡಿಯುವ ನೀರು, ನಿರಂತರ ವಿದ್ಯುತ್ ಸರಬರಾಜು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು.

ಎಸ್ಪಿ ಪದ್ಮಿನಿ ಸಾಹು, ಎಎಸ್ಪಿ ಉದೇಶ ಅವರು ಹಬ್ಬದ ಪ್ರಾರ್ಥನೆ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು. ಇನ್ನಿತರ ಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಲಾಗುವುದು ಎಂದರು. ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮಿ, ತಹಶೀಲ್ದಾರರಾದ ಬಸವರಾಜು, ಮಂಜುಳ, ನಗರಸಭೆ ಆಯುಕ್ತರಾದ ಎಸ್.ವಿ. ರಾಮದಾಸ್, ಮುಖಂಡರಾದ ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ, ನಗರಸಭಾ ಸದಸ್ಯರಾದ ಅಬ್ರಾರ್ ಅಹಮದ್, ಸಯ್ಯದ್ ರಫಿ, ಚಾ.ರಂ. ಶ್ರೀನಿವಾಸಗೌಡ ಸೇರಿದಂತೆ ಇನ್ನಿತರ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ