ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ ಅಭ್ಯರ್ಥಿಗಳಿಗೆ ನೀಡಲಾಗುವ ಚಿಹ್ನೆಗಳ ಹಂಚಿಕೆ, ಮುದ್ರಣದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಮುಖಂಡರ ಅಸಮಾಧಾನ:
ಈ ತಾರತಮ್ಯದ ವಿರುದ್ಧ ಜಿಲ್ಲಾಧಿಕಾರಿಗಳು ಹಾಗೂ ರಾಜ್ಯ ಚುನಾವಣಾ ಅಧಿಕಾರಿಗಳಿಗೂ ದೂರು ನೀಡಲಾಗಿದೆ. ಪಕ್ಷದ ಚಿಹ್ನೆಗಳನ್ನು ದೊಡ್ಡದಾಗಿ ಕಾಣುವಂತೆ ಮುದ್ರಿಸುವವರೆಗೂ ಇವಿಎಂ ಯಂತ್ರಗಳಿಗೆ ಅಳವಡಿಸುವ ಕೆಲಸವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.ಆಯೋಗದ ನಿಯಮದಂತೆ ಮುದ್ರಣ:
ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿ ರಾಜೀವಲೋಚನ ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ, ರಾಜ್ಯ ಚುನಾವಣಾ ಆಯೋಗದ ನಿಯಮ ಅನುಸಾರವೇ ಎಲ್ಲಾ ಪಕ್ಷದ ಹಾಗೂ ಸ್ವತಂತ್ರ ಅಭ್ಯರ್ಥಿಗಳ ಚಿಹ್ನೆಗಳನ್ನು ಮುದ್ರಿಸಲಾಗಿದೆ. ಪ್ರತಿಭಟನಾಕಾರರ ಮನವಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿಶ್ವನಾಥರೆಡ್ಡಿ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿವೆಂಕಟೇಶ್, ಆದಿತ್ಯ ನಾಗೇಶ್, ಲಾವಣ್ಯ ನಾಗರಾಜ್, ರಾಮಾಂಜಿನಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಲಕ್ಷ್ಮೀಪತಯ್ಯ, ಕುಂಟನಹಳ್ಳಿ ಮಂಜುನಾಥ್, ಮುಖಂಡರಾದ ತೂಬಗೆರೆ ಹೋಬಳಿ ಅಧ್ಯಕ್ಷ ಜಗನ್ನಾಥಚಾರ್, ಬಾಶೆಟ್ಟಿಹಳ್ಳಿ ಜೆಡಿಎಸ್ ಅಭ್ಯರ್ಥಿಗಳಾದ ವಿಶ್ವನಾಥ್, ನಾಗರಾಜ್, ಮಧನ್, ಶ್ರೀನಿವಾಸ್, ಮುಖಂಡರಾದ ಸೋನು, ರಿಯಾಜ್, ಶ್ರೀನಿವಾಸ್ ಇತರರಿದ್ದರು.
19ಕೆಡಿಬಿಪಿ1-ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಸಂಬಂಧ ಅಭ್ಯರ್ಥಿಗಳಿಗೆ ನೀಡಲಾಗುವ ಚಿಹ್ನೆಗಳ ಗಾತ್ರ ವ್ಯತ್ಯಾಸ ವಿರೋಧಿಸಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು