ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ ತರಬೇತಿ ಮತ್ತು ಉದ್ಯೋಗ ನಿಯೋಜನಾ
ಭಾಗವಾಗಿದ್ದು, ವಿದ್ಯಾರ್ಥಿಗಳನ್ನು ಕ್ಯಾಂಪಸ್ ಮತ್ತು ಆಫ್-ಕ್ಯಾಂಪಸ್ ಉದ್ಯೋಗ ನೇಮಕಾತಿ ಪ್ರಕ್ರಿಯೆಗಳಿಗೆ ಸಮರ್ಥವಾಗಿ ಸಿದ್ಧಗೊಳಿಸುವ ಉದ್ದೇಶವನ್ನು ಹೊಂದಿದೆ. ಉದ್ಯಮಗಳ ಪ್ರಸ್ತುತ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳ ಡಿಜಿಟಲ್ ಕೌಶಲ್ಯ, ಉದ್ಯೋಗಾರ್ಹ ಸಾಮರ್ಥ್ಯ, ಸಂವಹನ ಕೌಶಲ್ಯ ಹಾಗೂ ವೃತ್ತಿಪರ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ತರಬೇತಿಯನ್ನು ರೂಪಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೃತಕ ಬುದ್ಧಿಮತ್ತೆ ಮತ್ತು ಉದ್ಯೋಗಾರ್ಹತಾ ಕೌಶಲ್ಯಗಳು ಎಂಬ ಪ್ರಮುಖ ವಿಷಯಗಳ ಕುರಿತು ತರಬೇತಿ ನೀಡಲಾಯಿತು. ತರಬೇತುದಾರ ದೀಪಕ್ ಬಡಿಗೇರ್ ಮತ್ತು ಆಯೆಶತ್ ಹಫೀಝಾ ಅವರು ವಿವಿಧ ಪ್ರಾಯೋಗಿಕ ಚಟುವಟಿಕೆಗಳು ಹಾಗೂ ಸಂವಾದಾತ್ಮಕ ಅಧಿವೇಶನಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕೃತಕ ಬುದ್ಧಿಮತ್ತೆಯ ಮೂಲ ಪರಿಕಲ್ಪನೆಗಳು, ಉದಯೋನ್ಮುಖ ತಂತ್ರಜ್ಞಾನಗಳ ಬಳಕೆ, ಸಂವಹನ ಕೌಶಲ್ಯ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ, ತಂಡದೊಂದಿಗೆ ಕಾರ್ಯನಿರ್ವಹಿಸುವ ಕೌಶಲ್ಯ ಹಾಗೂ ವೃತ್ತಿಪರ ಜೀವನಕ್ಕೆ ಅಗತ್ಯವಾದ ಸಾಮರ್ಥ್ಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಐಬಿಎಂ ಸ್ಕಿಲ್ ಬಿಲ್ಡಿಂಗ್ ಡಿಜಿಟಲ್ ಕಲಿಕಾ ವೇದಿಕೆಯ ಪರಿಚಯ ಮಾಡಿಕೊಡಲಾಯಿತು. ನಿಗದಿತ ಕಲಿಕಾ ಅವಶ್ಯಕತೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಯಿತು. ಈ ಪ್ರಮಾಣಪತ್ರಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅರ್ಹತೆಯೊಂದಿಗೆ ಹೆಚ್ಚುವರಿ ವೃತ್ತಿಪರ ಕೌಶಲ್ಯಗಳನ್ನು ಗುರುತಿಸಲು ಸಹಕಾರಿಯಾಗಲಿವೆ.ಶೈಕ್ಷಣಿಕ ಜ್ಞಾನ ಮತ್ತು ಉದ್ಯಮ ಕ್ಷೇತ್ರದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ವಿದ್ಯಾರ್ಥಿಗಳನ್ನುಉದ್ಯೋಗಕ್ಕೆ ಸನ್ನದ್ಧರನ್ನಾಗಿಸುವ ನಿಟ್ಟಿನಲ್ಲಿ ಈ ಐದು ದಿನಗಳ ತರಬೇತಿ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯಮ ಕ್ಷೇತ್ರದ ಅಗತ್ಯಗಳಿಗೆ
ಮಾತ್ರವಲ್ಲದೆ, ಡಿಜಿಟಲ್ ಜ್ಞಾನ, ಕೃತಕ ಬುದ್ಧಿಮತ್ತೆಯ ಅರಿವು, ಸಂವಹನ ಕೌಶಲ್ಯ ಮತ್ತು ವೃತ್ತಿಪರ ಸಾಮರ್ಥ್ಯಗಳೂ
ಸ್ವಾಯತ್ತ ಶಿಕ್ಷಣ ವ್ಯವಸ್ಥೆಯಡಿ ನವೀನ ಕಲಿಕಾ ವಿಧಾನಗಳು, ಕೌಶಲ್ಯಾಧಾರಿತ ತರಬೇತಿ, ಉದ್ಯೋಗ ನಿಯೋಜನೆಗೆ ಪೂರಕ ಕಾರ್ಯಕ್ರಮಗಳು ಹಾಗೂ ಉದ್ಯಮ ಸಂಪರ್ಕದ ಮೂಲಕ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕಾಲೇಜು ಬದ್ಧವಾಗಿದೆ. ನಿಮ್ಮ ಉನ್ನತ ಶಿಕ್ಷಣದ ಕನಸುಗಳಿಗೆ ಸಂತ ಫಿಲೋಮಿನಾ ಕಾಲೇಜು ಸೂಕ್ತ ವೇದಿಕೆ. ಜ್ಞಾನ, ಕೌಶಲ್ಯ ಮತ್ತು
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು – ನಿಮ್ಮ ಉಜ್ವಲ ಭವಿಷ್ಯದತ್ತ ಮೊದಲ ಹೆಜ್ಜೆ!
ಪ್ರಾಂಶುಪಾಲರು, ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು