ಸ್ವಸಹಾಯ ಸಂಘಗಳ ಹಣಕಾಸು ವಹಿವಾಟು ಡಿಜಿಟಲೀಕರಣ: ಎಲ್‌.ಎನ್‌.ಮನೀಶ್

KannadaprabhaNewsNetwork | Published : Jul 11, 2024 1:31 AM

ಸಾರಾಂಶ

ನರಸಿಂಹರಾಜಪುರ, ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.

ತಾಲೂಕು ಪಂಚಾಯಿತಿ ಸಾಮಾರ್ಥ್ಯ ಸೌಧದಲ್ಲಿ ಲೋಕೋಸ್ ತಂತ್ರಾಂಶದ ತರಬೇತಿ ಕಾರ್ಯಾಗಾರ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.

ಸೋಮವಾರ ತಾಪಂ ಸಾಮರ್ಥ್ಯಸೌಧದಲ್ಲಿ ಎನ್.ಆರ್.ಎಲ್.ಎಂ. ಯೋಜನೆ ಗ್ರಾ.ಪಂ. ಮಟ್ಟದ ಒಕ್ಕೂಟಗಳ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಲೋಕೋಸ್ ತಂತ್ರಾಂಶದ ಕುರಿತು 3 ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಇನ್ನು ಮುಂದೆ ಸ್ವ ಸಹಾಯ ಸಂಘಗಳ ಹಣಕಾಸು ವ್ಯವಹಾರ ಸಂಪೂರ್ಣವಾಗಿ ಲೋಕೋಸ್ ಎಂಬ ತಂತ್ರಾಂಶದಲ್ಲಿ ಅಳವಡಿಸಲಾಗುತ್ತಿದೆ. ತಾವು ಇದ್ದಲ್ಲೆ ವಹಿವಾಟುಗಳ ಬಗ್ಗೆ ಈ ತಂತ್ರಾಂಶದ ಮೂಲಕ ಮಾಹಿತಿ ಪಡೆಯಬಹುದು. ಸ್ವ ಸಹಾಯ ಸಂಘದ ಸದಸ್ಯರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗಬೇಕು ಎಂಬ ಉದ್ದೇಶ ಸರ್ಕಾರದ್ದು. ಈ ನಿಟ್ಟಿನಲ್ಲಿ ಎಲ್ಲಾ ಸ್ವ ಸಹಾಯ ಸಂಘಗಳ ಒಕ್ಕೂಟಗಳ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ 3 ದಿನಗಳ ತರಬೇತಿ ನೀಡಲಾಗುತ್ತಿದೆ ಎಂದರು.ಎನ್‌.ಆರ್. ಎಲ್.ಎಂ.ಯೋಜನೆ ತಾಲೂಕು ವ್ಯವಸ್ಥಾಪಕ ಸುಬ್ರಮಣ್ಯ ಮಾತನಾಡಿ, ಗ್ರಾಪಂ ಮಟ್ಟದ ಒಕ್ಕೂಟಗಳ ಸ್ಥಳೀಯ ಸಂಪನ್ಮೂಲ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ ಲೋಕೋಸ್ ತಂತ್ರಾಂಶದ ಬಗ್ಗೆ ಮೂರು ದಿನಗಳ ಕಾರ್ಯಾಗಾರಕ್ಕೆ ಇಂದು ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎನ್.ಆರ್.ಎಲ್.ಎಂ ಯೋಜನೆ ಮುಖ್ಯ ಪುಸ್ತಕ ಬರಹಗಾರರಿಗೂ ಈ ತರಬೇತಿ ನೀಡಲಾಗುತ್ತದೆ ಎಂದರು.ಚಿಕ್ಕಮಗಳೂರು ಎನ್.ಆರ್.ಎಲ್.ಎಂ. ಯೋಜನೆ ಜಿಲ್ಲಾ ಡಿಎಂಎಂಯು ಭರತ್, ಜಿಲ್ಲಾ ಕೌಶಲ್ಯ ಅಧಿಕಾರಿ ರಾಜೇಶ್ ತರಬೇತಿ ನೀಡಿದರು. ತರಬೇತಿಯಲ್ಲಿ ಎನ್.ಆರ್.ಎಲ್.ಎಂ. ಯೋಜನೆ ಗ್ರಾಪಂ ಮಟ್ಟದ ಒಕ್ಕೂಟಗಳ ಸಂಪನ್ಮೂಲ ವ್ಯಕ್ತಿಗಳು ಹಾಗೂ ಎನ್.ಆರ್.ಎಲ್.ಎಂ. ಸಿಬ್ಬಂದಿ ಕಿಶೋರ್‌ಕುಮಾರ್, ಶ್ವೇತಾ, ಚೇತನ್,ಗಿರೀಶ್, ಎನ್.ವಿ.ಶೈನಿ ಇದ್ದರು.

Share this article