ಶಿಥಿಲಗೊಂಡ ಸರ್ಕಾರಿ ಶಾಲೆ ಖಾಸಗಿ ಕಟ್ಟಡಕ್ಕೆ ಸ್ಥಳಾಂತರ

KannadaprabhaNewsNetwork |  
Published : Jul 29, 2025, 01:04 AM IST
ಕುಂಬಾರಕೊಪ್ಪದ ಸರ್ಕಾರಿ ಉರ್ದುಶಾಲೆಯನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. | Kannada Prabha

ಸಾರಾಂಶ

ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.

ಅಳ್ನಾವರ: ತಾಲೂಕಿನ ಕುಂಬಾರಕೊಪ್ಪ ಗ್ರಾಮದ ಉರ್ದು ಶಾಲೆಯ ಕುರಿತಾಗಿ ಸೋಮವಾರ ''''ಶಿಥಿಲಗೊಂಡ ಶಾಲೆಯಲ್ಲಿಯೇ ನಡೆಯುತ್ತಿರುವ ತರಗತಿ'''' ಎಂಬ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಗೊಳ್ಳುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ತಾಪಂ ಅಧಿಕಾರಿಗಳು ಸೋಮವಾರ ಸ್ಥಳಕ್ಕೆ ಆಗಮಿಸಿ ಶಾಲೆಯನ್ನು ಖಾಸಗಿ ಕಟ್ಟಡಕ್ಕೆ ಸ್ಥಳಾಂತರಿಸಿದರು.

ಈ ವೇಳೆ ಸಂತಸಗೊಂಡ ಗ್ರಾಮಸ್ಥರು ಕಳೆದ ಎರಡು ವರ್ಷಗಳಿಂದ ಶಾಲೆಯು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದರೂ ಸಹ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಅರ್ಜಿ ಸಲ್ಲಿಸುತ್ತಾ ಬಂದಿತ್ತು. ಆದರೆ, ಯಾವುದೇ ಪರಿಣಾಮವಾಗಿರಲಿಲ್ಲ. ಕನ್ನಡಪ್ರಭದಲ್ಲಿ ವರದಿ ಪ್ರಕಟವಾದ ಒಂದೇ ದಿನದಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ದೊರೆತಿದೆ ಎಂದು ಗ್ರಾಮಸ್ತರು ಸಿಹಿಹಂಚಿ ಧನ್ಯವಾದ ತಿಳಿಸಿದರು.

ಈಗಾಗಲೇ ಸರ್ಕಾರದಿಂದ ಗ್ರಾಮದಲ್ಲಿನ ಶಾಲೆಗೆ ಎರಡು ಕಟ್ಟಡಗಳು ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಬಿಇಒ ರಾಮಕೃಷ್ಣ ಸದಲಗಿ ಕನ್ನಡಪ್ರಭಕ್ಕೆ ತಿಳಿಸಿದರು.

ಈ ವೇಳೆ ತಾಪಂ ಅಧಿಕಾರಿ ಸಂತೋಷ ತಳಕಲ್ಲ, ರೈತ ಸಂಘದ ತಾಲೂಕು ಅಧ್ಯಕ್ಷ ರವಿ ವಡ್ಡರ, ಎಸ್‌ಡಿಎಂಸಿ ಅಧ್ಯಕ್ಷ ಮಹಾಬೂಬ ನಿಚ್ಚನಕಿ, ರಾಜೇಸಾಬ ನಿಚ್ಚನಕಿ, ಸಲೀಂ ತಾಳಿಕೋಟಿ, ಸುಭಾನಿ ಅಮ್ಮಿನಬಾವಿ, ಸಾಧಿಕ ಗಬ್ಬೂರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌
2 ದಿನದಲ್ಲಿ 2ನೇ ಬಾರಿ ಸಿದ್ದು ಆಪ್ತ ರಾಜಣ್ಣ- ಡಿಕೆಶಿ ಭೇಟಿ