ಹೃದಯದ ಆರೋಗ್ಯಕ್ಕೆ ನಿಯಮಿತ ವ್ಯಾಯಾಮ, ಜೀವನ ಶೈಲಿ ಬದಲಿಸಿಕೊಳ್ಳಿ : ದಿನೇಶ್ ಗುಂಡೂರಾವ್

KannadaprabhaNewsNetwork |  
Published : Sep 30, 2024, 01:23 AM ISTUpdated : Sep 30, 2024, 01:05 PM IST
ವಿಶ್ವ ಹೃದಯ ದಿನ ಅಂಗವಾಗಿ ಸ್ಪಷ್೯ ಆಸ್ಪತ್ರೆ ಆಯೋಜಿಸಿದ್ದ ‘ಆರೋಗ್ಯಕರ ಹೃದಯಕ್ಕಾಗಿ ನಡಿಗೆ’ ವಾಕಥಾನ್‌ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಸ್ಷಷ್೯ ಸಮೂಹ ಆಸ್ಪತ್ರೆ ಮುಖ್ಯಸ್ಥ ಡಾ.ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. | Kannada Prabha

ಸಾರಾಂಶ

ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮ ಮಾಡುವುದು ಹಾಗೂ ಜೀವನಶೈಲಿಯ ಬದಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 ಬೆಂಗಳೂರು :  ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ವ್ಯಾಯಾಮ ಮಾಡುವುದು ಹಾಗೂ ಜೀವನಶೈಲಿಯ ಬದಲಾವಣೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಶ್ವ ಹೃದಯ ದಿನ ಅಂಗವಾಗಿ ಸ್ಪರ್ಶ ಆಸ್ಪತ್ರೆ ಆಯೋಜಿಸಿದ್ದ ‘ಆರೋಗ್ಯಕರ ಹೃದಯಕ್ಕಾಗಿ ನಡಿಗೆ’ ವಾಕಥಾನ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿವೆ. ಕಿರಿಯ ವಯಸ್ಸಿನಲ್ಲೇ ಹೃದಯ ರೋಗಗಳಿಗೆ ಯುವ ಜನತೆ ಸಾವಿಗೀಡಾಗುತ್ತಿದ್ದಾರೆ. ನಾವು ಸೇವಿಸುವ ಆಹಾರ, ಪದ್ಧತಿ, ಹವ್ಯಾಸಗಳು, ದುಶ್ಚಟಗಳ ಜೊತೆಗೆ ಜೀವನಶೈಲಿ ಕಾರಣವಾಗುತ್ತಿದೆ. ನಾವು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದರು.

ಆರೋಗ್ಯವಂತ ವ್ಯಕ್ತಿಗಳಿಂದ ಮಾತ್ರ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬಹುದು. ದೇಶದ ಜನರು ಆರೋಗ್ಯವಂತರಾಗಿದ್ದರೆ ಅವರ ಸಾಮರ್ಥ್ಯವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡು ದೇಶ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸಬಹುದು ಎಂದು ಸಚಿವರು ಹೇಳಿದರು.

ಸರ್ಕಾರದಿಂದಲೇ ನಾಗರಿಕರ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಅಭಿಯಾನ ಕೈಗೊಳ್ಳುವ ಮೂಲಕ ಪ್ರಾಥಮಿಕ ಹಂತದಲ್ಲೇ ರೋಗಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಘೋಷಿಸಿದರು.

ಸ್ಷರ್ಶ ಸಮೂಹ ಆಸ್ಪತ್ರೆ ಮುಖ್ಯಸ್ಥ ಡಾ। ಶರಣ್‌ ಪಾಟೀಲ್ ಮಾತನಾಡಿ, ಹೃದಯದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸ್ಪರ್ಶ ಆಸ್ಪತ್ರೆ ವಿಶೇಷ ಕಾಳಜಿ ಹೊಂದಿದ್ದು, ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಈ ಮೊದಲು ಹಿರಿಯ ನಾಗರಿಕರು ಹೃದಯ ಆಸ್ಪತ್ರೆಗೆ ಬರುತ್ತಿದ್ದರು. ಈಗ ಯುವಜನತೆ ಹೃದಯ ಸಮಸ್ಯೆಗಳೊಂದಿಗೆ ಬರುತ್ತಿದ್ದಾರೆ. ಹೀಗಾಗಿ, ಮಕ್ಕಳು, ಹದಿಹರೆಯದವರಲ್ಲಿ ಹೃದಯದ ಆರೋಗ್ಯದ ಕುರಿತು ತಿಳುವಳಿಕೆ ಮೂಡಿಸಬೇಕಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು