ಡಿಂಕಾ ಡೇರಿ ಚುನಾವಣೆ: 13 ಸ್ಥಾನಗಳ ಪೈಕಿ 11 ಸ್ಥಾನ ದಳಪತಿ ಪಾಲು..!

KannadaprabhaNewsNetwork |  
Published : Feb 28, 2024, 02:37 AM IST
27ಕೆಎಂಎನ್ ಡಿ22 | Kannada Prabha

ಸಾರಾಂಶ

13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಮಾದೇವಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಅಂತಿಮವಾಗಿ ಜೆಡಿಎಸ್ ಬೆಂಬಲಿತ 10 ಮಂದಿ ಅಭ್ಯರ್ಥಿಗಳು ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ 2 ಸದಸ್ಯರು ಚುನಾಯಿತರಾಗುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಪಾಂಡವಪುರತಾಲೂಕಿನ ಡಿಂಕಾ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 13 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಜೆಡಿಎಸ್ ಬೆಂಬಲಿತ ನಿರ್ದೇಶಕರು ಆಯ್ಕೆಯಾಗುವ ಮೂಲಕ ಡೇರಿ ಆಡಳಿತವನ್ನು ಜೆಡಿಎಸ್ ತೆಕ್ಕೆಗೆ ತೆಗೆದುಕೊಂಡಿದೆ.

ಸಂಘದ 13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರಮಾದೇವಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದ 12 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 24 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದರು. ಅಂತಿಮವಾಗಿ ಜೆಡಿಎಸ್ ಬೆಂಬಲಿತ 10 ಮಂದಿ ಅಭ್ಯರ್ಥಿಗಳು ಹಾಗೂ ರೈತಸಂಘ-ಕಾಂಗ್ರೆಸ್ ಬೆಂಬಲಿತ 2 ಸದಸ್ಯರು ಚುನಾಯಿತರಾಗುವ ಮೂಲಕ ನಿರ್ದೇಶಕರಾಗಿ ಆಯ್ಕೆಯಾದರು.

ಜೆಡಿಎಸ್ ಬೆಂಬಲಿತ ಡಿ.ಇ.ಕಲಿಗಣೇಶ-289, ಗಿರೀಶ್-291, ಪುಟ್ಟೇಗೌಡ-287, ಮಹದೇವಪ್ಪ-280, ಡಿ.ವಿ.ಶಿವಣ್ಣ-273, ಶಿವಲಿಂಗಪ್ಪ-266, ಮಹೇಶ್-249, ಸೌಮ್ಯಕುಮಾರ್-238, ಕೃಷ್ಣಶೆಟ್ಟಿ-229, ಶ್ರೀನಿವಾಸಯ್ಯ-121 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಉಳಿದಂತೆ ರೈತಸಂಘ-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಇಂದ್ರೇಶ್-297, ಪ್ರೇಮಮ್ಮ-258 ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.

ಗ್ರಾಪಂ ಮಾಜಿ ಅಧ್ಯಕ್ಷ ಪುಟ್ಟರಾಜು ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದ ಹಾಗೂ ಡಿಂಕಾ ಡೇರಿ ಷೇರುದಾರರ ಬೆಂಬಲದಿಂದ 11 ಮಂದಿ ಜೆಡಿಎಸ್ ಬೆಂಬಲಿತರು ಭರ್ಜರಿ ಗೆಲುವು ಸಾಧಿಸಿ ಆಯ್ಕೆಯಾಗುವ ಡೇರಿ ಆಡಳಿತವನ್ನು ಜೆಡಿಎಸ್ ತೆಕ್ಕೆ ತೆಗೆದುಕೊಂಡಿದ್ದಾರೆ. ಆಯ್ಕೆಯಾಗಿರುವ ಎಲ್ಲಾ ನಿರ್ದೇಶಕರು ಡೇರಿ ಅಭಿವೃದ್ದಿಗೆ ಹಾಗೂ ಹಾಲು ಉತ್ಪಾದಕರ ಸಮಸ್ಯೆಗಳಿಗೆ ಸ್ಪಂಧಿಸಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಈ ವೇಳೆ ಗ್ರಾಮಸ್ಥರು, ಜೆಡಿಎಸ್ ಪಕ್ಷದ ಮುಖಂಡರು, ಯಜಮಾನರು ಹಾಜರಿದ್ದರು.ಮಾರ್ಗೋನಹಳ್ಳಿ ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಕಿಕ್ಕೇರಿ:ಹೋಬಳಿಯ ಮಾರ್ಗೋನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ವೆಂಕಟೇಶ್, ಉಪಾಧ್ಯಕ್ಷರಾಗಿ ಚಲುವಯ್ಯ ಅವಿರೋಧವಾಗಿ ಆಯ್ಕೆಯಾದರು.ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್, ಉಪಾಧ್ಯಕ್ಷ ಸ್ಥಾನಕ್ಕೆ ಚಲುವಯ್ಯ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನುಸಹಕಾರ ಸಂಘದ ಉಪನಿಬಂಧಕ ಭರತ್‌ಕುಮಾರ್ ಘೋಷಿಸಿದರು.ನೂತನ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಸದಸ್ಯರರು, ಷೇರುದಾರರು ಯಶಸ್ವಿನಿ ಯೋಜನೆ ಸದುಪಯೋಗಪಡಿಸಿಕೊಳ್ಳಲು ಗಮನ ಹರಿಸಲಾಗುವುದು. ಸಂಘದ ಅಭಿವೃದ್ಧಿಗೆ ನಿರ್ದೇಶಕರ, ಮುಖಂಡರ ಸಹಕಾರದೊಂದಿಗೆ ಶ್ರಮಿಸಲಾಗುವುದು ಎಂದರು.ಗ್ರಾಮ ಮುಖಂಡರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಿಹಿ ತಿನಿಸಿ, ಪುಷ್ಪಮಾಲೆ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಪಟ್ಟರು.ನಿರ್ದೇಶಕರಾದ ನರಸಿಂಹ, ರಮೇಶ್, ಮಂಜೇಗೌಡ, ಗಿರೀಶ್, ಶಿವೇಗೌಡ, ದೇವರಾಜು, ಯಶೋದಮ್ಮ, ಲಲಿತಮ್ಮ, ಮುಖಂಡರಾದ ಪುಟ್ಟೇಗೌಡ, ನರಸೇಗೌಡ, ರಾಜಣ್ಣ, ಅಜ್ಜೇಗೌಡ, ಗೋವಿಂದ, ಮಂಜೇಗೌಡ, ಪಾಪೇಗೌಡ, ಮಂಜುನಾಥ್, ಗಿರೀಶ್, ಶಂಕರ್, ಕಾರ್ಯದರ್ಶಿ ಸ್ವಾಮಿ ಉಪಸ್ಥಿತರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ