ಆಶಾ ಕಾರ್ಯಕರ್ತೆಯರ ಬೇಡಿಕೆಈಡೇರಿಸಲು ಸರ್ಕಾರಕ್ಕೆ ಸೂಚಿಸಿ

KannadaprabhaNewsNetwork |  
Published : Nov 26, 2026, 02:00 AM IST
ಪೋಟೋ | Kannada Prabha

ಸಾರಾಂಶ

ಚಿಕ್ಕಮಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎಂಟು ದಿನಗಳಿಂದ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಿಗೆ ವಿಪ ಸದಸ್ಯ ಡಾ.ಸಿ.ಟಿ.ರವಿ ಮನವಿ

ಚಿಕ್ಕಮಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎಂಟು ದಿನಗಳಿಂದ ಧರಣಿ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ರಾಜ್ಯಪಾಲರಿಗೆ ಪತ್ರ ಬರೆದಿರುವ ಅವರು, ರಾಜ್ಯದ ಆರೋಗ್ಯ ಸೇವಾ ವ್ಯವಸ್ಥೆಯಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ತಲುಪಿಸುವುದು, ತಾಯಿ ಮತ್ತು ಮಗುವಿನ ಆರೋಗ್ಯದ ಕಾಳಜಿ, ಲಸಿಕಾ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಅವರು ಅನನ್ಯ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜನರ ಆರೋಗ್ಯ ರಕ್ಷಣೆಯ ಜವಾಬ್ದಾರಿ ನಿರ್ವಹಿಸುವ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಎಂಟು ದಿನಗಳಿಂದ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಕಳವಳಕಾರಿ ಸಂಗತಿ. ನಿರಂತರವಾಗಿ ಸರ್ಕಾರದ ಗಮನಕ್ಕೆ ಸಮಸ್ಯೆಗಳನ್ನು ತಂದರೂ ಸಕಾರಾತ್ಮಕವಾಗಿ ಸ್ಪಂದಿಸದಿರುವುದು ವಿಷಾದನೀಯ. ಹಗಲಿರುಳು ಜನರ ಸೇವೆಯಲ್ಲಿ ತೊಡಗಿರುವವರು ತಮ್ಮ ಬದುಕಿನ ಅನಿವಾರ್ಯತೆಗಳಿಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿ ಎಂದು ಹೇಳಿದ್ದಾರೆ.

ನಿರಂತರ ಧರಣಿಯಿಂದ ಕಾರ್ಯಕರ್ತೆಯರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ಮಾನಸಿಕ ಒತ್ತಡ ಉಂಟಾಗುವುದರ ಜತೆಗೆ ಸಾರ್ವಜನಿಕ ಆರೋಗ್ಯ ಸೇವೆಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಸರ್ಕಾರ ಕೂಡಲೇ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮಧ್ಯಪ್ರವೇಶಿಸಿ, ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸರ್ಕಾರ ಕೂಡಲೇ ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಬೇಕು. ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಗಣಿಸಿ ಕಾಲಮಿತಿಯೊಳಗೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಅಲ್ಲದೆ, ಆಶಾ ಕಾರ್ಯಕರ್ತೆಯರ ಸೇವೆಗೆ ತಕ್ಕ ಗೌರವ ಮತ್ತು ಸೂಕ್ತ ಸೌಲಭ್ಯಗಳನ್ನು ಒದಗಿಸುವ ಮೂಲಕ ಧರಣಿಯನ್ನು ಗೌರವಯುತವಾಗಿ ಅಂತ್ಯಗೊಳಿಸಲು ಸರ್ಕಾರಕ್ಕೆ ಸೂಚಿಸಬೇಕೆಂದು ಪತ್ರದಲ್ಲಿ ಕೋರಿದ್ದಾರೆ.(ಸಿ.ಟಿ.ರವಿ ಮಗ್‌ಶಾಟ್‌)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗರ್ಭಿಣಿಯಾದ ಅಪ್ರಾಪ್ತೆ: ಪೋಕ್ಸೋ ಕೇಸ್‌ ದಾಖಲು
ಇಳಕಲ್ಲಿಗೆ ಬಂತು ಕನ್ನಡ ಬಂಡಾರದ ರಥ