)
ಕನ್ನಡ ಪ್ರಭ ವಾರ್ತೆ ವಿಧಾನ ಪರಿಷತ್
ಗುರುವಾರ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ನಗರದಲ್ಲಿ 35 ಪೊಲೀಸರು/ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಉಳಿದಂತೆ ಮಂಗಳೂರು ನಗರ 7, ಹಾಸನ ಜಿಲ್ಲೆಯಲ್ಲಿ 8, ವಿಜಯನಗರದಲ್ಲಿ 4 ಪ್ರಕರಣ ದಾಖಲಾಗಿದೆ ಎಂದರು.
ಪೊಲೀಸರು/ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೂಚನೆ, ನಿರ್ದೇಶನ ನೀಡಲಾಗಿದೆ. ಪ್ರಮುಖವಾಗಿ ಇಂಥ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ/ಸಿಬ್ಬಂದಿ ಕರ್ತವ್ಯದ ಮೇಲೆ ಉನ್ನತಾಧಿಕಾರಿಗಳು ನಿಗಾ ವಹಿಸುವಂತೆ ಸೂಚನೆ ನೀಡಲಾಗಿದೆ. ಇಂಥ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಯನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ. ಎಲ್ಲ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯಮಿತವಾಗಿ ನಡೆಸಲಾಗುತ್ತದೆ ಎಂದು ಸಚಿವರು ತಿಳಿಸಿದರು.ಇದಕ್ಕೂ ಮುನ್ನ ಮಾತನಾಡಿದ ಟಿ.ಎ.ಶರವಣ, ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಇದ್ದಾರೆ, ಆದರೆ ಇತ್ತೀಚೆಗೆ ಕೆಲ ಪೊಲೀಸರ ನಡವಳಿಕೆ ನೋಡಿದರೆ ರಾಜ್ಯದಲ್ಲಿ ಬೇಲಿಯೇ ಹೊಲ ಮೇಯ್ದಂತಾಗಿದೆ. ಪೊಲೀಸರ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ರಕ್ಷಕರೇ ಭಕ್ಷರಾಗುತ್ತಿದ್ದಾರೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡಿ ನಂತರ ಮತ್ತೆ ಸೇವೆಗೆ ಸೇರಿಸಿಕೊಳ್ಳಲಾಗುತ್ತಿದೆ. ಈ ರೀತಿ ಮಾಡದೆ ಸೇವೆಯಿಂದಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಸಾಕ್ಷಿ ಸಹಿತ ಮಾಹಿತಿ ನೀಡುತ್ತೇನೆ:ಸರ್ಕಾರ ನೀಡಿರುವ ವರದಿಯಲ್ಲಿ ಉಲ್ಲೇಖಿಸದಿರುವ ಅಪರಾಧಗಳ ಬಗ್ಗೆ ತಮ್ಮಲ್ಲಿರುವ ಮಾಹಿತಿಯನ್ನು ಸಾಕ್ಷಿ ಸಹಿತ ನೀಡುತ್ತೇನೆ, ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶರವಣ ತಿಳಿಸಿದರು.