ಕೊಪ್ಪಳ: ವಿಕಲಚೇತನ ನೌಕರರಿಗೆ ಅವರ ಅಂಗವೈಕಲ್ಯತೆಗೆ ಅನುಗುಣವಾಗಿ ಸರ್ಕಾರಿ ನೌಕರರ ಕ್ರೀಡಾಕೂಟದ ಜತೆ ರಾಜ್ಯ ಮಟ್ಟದ ವಿಕಲಚೇತನ ನೌಕರರ ಕ್ರೀಡಾಕೂಟದ ಆಯೋಜನೆಯ ಅಗತ್ಯವಿದೆ ಎಂದು ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ನಾಗರಾಜ ಆರ್.ಜುಮ್ಮನ್ನವರ ಹೇಳಿದರು.
ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ, ವಿಕಲಚೇತನ ನೌಕರರೂ ಕೂಡಾ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕು ಎಂಬ ಹಂಬಲ ಹೊಂದಿದ್ದಾರೆ. ಆದರೆ ಸಾಮಾನ್ಯ ನೌಕರರ ಜತೆಯಲ್ಲಿ ವಿಕಲಚೇತನ ನೌಕರರು ಸ್ಪರ್ಧೆಒಡ್ಡುವುದು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಕಲಚೇತನ ನೌಕರರ ಸಂಘದಿಂದ ರಾಜ್ಯದಲ್ಲಿ ಪ್ರಥಮ ಬಾರಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿತ್ತು. ಇದನ್ನು ಮನಗಂಡು ಸರ್ಕಾರಿ ನೌಕರರ ಸಂಘದಿಂದ ನಮ್ಮ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟ ನಡೆಸಲಾಗುತ್ತದೆ. ಇದರಿಂದ ಉಳಿದ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಕಲಚೇತನ ನೌಕರರು ಕ್ರೀಡಾಕೂಟದಿಂದ ವಂಚಿತರಾಗುತ್ತಿದ್ದು, ಅಲ್ಲದೇ ಕೇವಲ 4 ಜಿಲ್ಲೆಯಲ್ಲಿ ಮಾತ್ರ ಕ್ರೀಡಾಕೂಟ ಆಯೋಜನೆ ಮಾಡುತ್ತಿರುವುದರಿಂದ ಪ್ರತಿಭೆಗಳು ಆ ಜಿಲ್ಲೆಗೆ ಮಾತ್ರ ಸಿಮಿತವಾಗುತ್ತವೆ. ರಾಜ್ಯ ಮಟ್ಟದಲ್ಲಿ ವಿಕಲಚೇತನ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಲಿ ಎಂದರು.
ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ್ ಜಾಬಗೌಡರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮಹ್ಮದ್ ಆಸೀಫ್ ಅಲಿ, ಖಜಾಂಚಿ ಜಯತೀರ್ಥ ದೇಸಾಯಿ, ಗೌರವಾಧ್ಯಕ್ಷ ಸಿದ್ದಪ್ಪ ಮೇಳಿ, ಕನಕಗಿರಿ ತಾಲೂಕಾಧ್ಯಕ್ಷೆ ಶಂಶಾದಬೇಗಂ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ, ಎನ್.ಪಿ.ಎಸ್. ಸಂಘದ ಜಿಲ್ಲಾಧ್ಯಕ್ಷ ಗೋಪಾಲ ದುಬೆ, ವಿಕಲಚೇತನ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಮಾರನಬಸರಿ, ತಾಲೂಕಾಧ್ಯಕ್ಷ ಅಂದಪ್ಪ ಇದ್ಲಿ, ಯಲಬುರ್ಗಾ ತಾಲೂಕಾಧ್ಯಕ್ಷ ಮಹೇಶ ಆರೇರ ಸೇರಿದಿಂತೆ ಮೊದಲಾದವರು ಉಪಸ್ಥಿತರಿದ್ದರು.