-ವಿಶ್ವಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಚೆನ್ನಾರೆಡ್ಡಿ ಪಾಟೀಲ್
------ಕನ್ನಡಪ್ರಭ ವಾರ್ತೆ ಶಹಾಪುರ
ಅಂಗವಿಕಲರು ಅಸಹಾಯಕರಲ್ಲ. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.ತಾಲೂಕು ವಿಕಲಚೇನ ಕ್ಷೇಮಾಭಿವೃದ್ಧಿ ಸಂಘ, ತಾಲೂಕು ವಿವಿಧ ದೇಶ ಮತ್ತು ಗ್ರಾಮೀಣ ಪುನರ್ ವಸತಿ ಹಾಗೂ ನಗರ ಪುನರ್ ವಸತಿ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ತಾಲೂಕು ಪಂಚಾಯಿತಿ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಕಲಚೇತನರು ಆತ್ಮವಿಶ್ವಾಸ ಹೆಚ್ಚಿಸಿಕೊಂಡು, ಸ್ವಾವಲಂಬಿ ಜೀವನ ನಡೆಸುವಲ್ಲಿ ಸಮಾಜಕ್ಕೆ ಮಾದರಿಯಾಗಬೇಕು ಎಂದರು.
ಮಾನಸಿಕವಾಗಿ, ಸದೃಢರಾಗಿ ಆತ್ಮಸ್ಥೆರ್ಯ ಬೆಳಸಿಕೊಳ್ಳಬೇಕು. ವಿಕಲಚೇತನರಿಗಾಗಿ ಸರ್ಕಾರ ಅನೇಕ ಸೌಲಭ್ಯ ಒದಗಿಸುತ್ತಿದ್ದು, ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ ಪಾಟೀಲ್ ಮಾತನಾಡಿ, ಅಂಗವಿಕಲರು ಕೂಡ ಮನುಷ್ಯರು. ಅವರಿಗೂ ಭಾವನೆಗಳಿವೆ. ಜಗತ್ತಿನ ಆಗು-ಹೋಗುಗಳಿಗೆ ಸ್ಪಂದಿಸುವ ಬೌದ್ಧಿಕ ಸಾಮರ್ಥ್ಯವಿದೆ ಎಂದರು.ನಗರದ ಖ್ಯಾತ ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ಸುಬೇದಾರ್ ಮಾತನಾಡಿ, ಅಂಗವಿಕಲರಿಗೂ ಸ್ವಾಭಿಮಾನದಿಂದ ಬದುಕುವ ಹಕ್ಕಿದೆ. ಅಂಗವಿಕಲರಿಗೂ ಸಮಾಜದ ಇತರ ವ್ಯಕ್ತಿಗಳಂತೆ ಸಮಾನವಾದ ಅವಕಾಶಗಳು ಸಿಗಬೇಕು. ಅವರಿಗೆ ಯೋಗ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅವರು ತಿಳಿಸಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ್ ಶರಬೈ, ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಸಿದ್ದಣ್ಣ ಬಿರಾದಾರ್, ಅಂಗವಿಕಲರ ಸಂಘದ ತಾಲೂಕು ಅಧ್ಯಕ್ಷ ಸಾಹೇಬ್ ಜಾನಿ, ಉತ್ತರ ಕರ್ನಾಟಕ ಕರವೇ ಅಧ್ಯಕ್ಷ ಶರಣು ಗದ್ದುಗೆ, ಕನ್ನಡಪರ ಸಂಘಟನೆಯ ಭೀಮಣ್ಣ ಶಖಾಪುರ, ಮೌನೇಶ ಸುರಪುರ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ಮತ್ತು ಅಂಗವಿಕಲರು ಭಾಗವಹಿಸಿದ್ದರು.-----
ಫೋಟೊ: ಶಹಾಪುರ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ವಿಶ್ವಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಉದ್ಘಾಟಿಸಿದರು.31ವೈಡಿಆರ್7: