ಅಂಗವಿಕಲರು ಸಾಮಾನ್ಯರಂತೆ ಜೀವನದಲ್ಲಿ ಸಾಧನೆ ಮಾಡಬೇಕು

KannadaprabhaNewsNetwork |  
Published : Jul 26, 2026, 02:30 AM IST
ರಾಣಿಬೆನ್ನೂರು ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಅತಿಥಿಗಳು ಉದ್ಘಾಟಿಸಿದರು.  | Kannada Prabha

ಸಾರಾಂಶ

ಅಂಗ ವೈಕಲ್ಯವನ್ನು ಶಾಪವೆಂದು ಪರಿಗಣಿಸದೇ ಅದನ್ನು ಸವಾಲಾಗಿ ಸ್ವೀಕರಿಸಿ ಸಾಮಾನ್ಯರಂತೆ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ ಹೇಳಿದರು.

ರಾಣಿಬೆನ್ನೂರು: ಅಂಗ ವೈಕಲ್ಯವನ್ನು ಶಾಪವೆಂದು ಪರಿಗಣಿಸದೇ ಅದನ್ನು ಸವಾಲಾಗಿ ಸ್ವೀಕರಿಸಿ ಸಾಮಾನ್ಯರಂತೆ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೀರೇಶ ಮೋಟಗಿ ಹೇಳಿದರು.

ನಗರದ ಸ್ನೇಹದೀಪ ಅಂಧ ಅಂಗವಿಕಲರ ಸಂಸ್ಥೆಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರ ಅಂಗವಿಕಲರಿಗೆ ಹಲವಾರು ಸೌಲಭ್ಯಗಳನ್ನು ಒದಗಿಸುತ್ತಿದ್ದು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಅಂಗವಿಕಲರು ಉತ್ತಮ ಜೀವನ ಸಾಗಿಸಬೇಕು ಎಂದರು.

ಯುನಿಸೆಮ್ ಅಗ್ರಿಟೆಕ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಚ್.ಎನ್. ದೇವಕುಮಾರ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.

ಸ್ನೇಹದೀಪ ಸಂಸ್ಥೆಯ ಧರ್ಮದರ್ಶಿಗಳಾದ ಕೆ.ಜಿ. ಮೋಹನ್, ಡಾ. ಪಾಲ್ ಮುದ್ದಾ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇ.70ಕ್ಕಿಂತ ಅಧಿಕ ಅಂಕಗಳನ್ನು ಪಡೆದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಬಹುಮಾನ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ, ಕ್ಷೇತ್ರ ಸಮನ್ವಯಾಧಿಕಾರಿ ಮಂಜು ನಾಯಕ, ವರ್ತಕ ಜಿ.ಜಿ. ಹೊಟ್ಟೇಗೌಡ್ರ, ವಸಂತಾ ಹುಲ್ಲತ್ತಿ, ಸುಮಾ ಉಪ್ಪಿನ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಲಂಕಾರಿ ಸಸ್ಯ ಬೆಳೆದು ಸ್ವಾವಲಂಬಿಗಳಾಗಿ: ಸುಮಾ ನಾಗರಾಜ ಹಾಸ್ಯಗಾರ
ಪೌರ ಕಾರ್ಮಿಕರು ನಾಡಿನ ದೊಡ್ಡ ಶಕ್ತಿ: ಆರ್.ವಿ. ದೇಶಪಾಂಡೆ