ವಿಪತ್ತು ನಿರ್ವಹಣಾ ಪ್ರಾಧಿಕಾರ ಸನ್ನದ್ಧ: ಡಿಸಿ ಮೀನಾ ನಾಗರಾಜ್‌

KannadaprabhaNewsNetwork |  
Published : May 17, 2025, 01:48 AM IST
ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್‌ಪಿ ವಿಕ್ರಮ ಅಮಟೆ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಪಾಕಿಸ್ತಾನ ಹಾಗೂ ಭಾರತ ನಡುವಿನ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯಾವುದೇ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ವಿವಿಧ ಇಲಾಖೆಗಳ ಸಮನ್ವಯದಲ್ಲಿ ಸಿದ್ಧತೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪಾಕಿಸ್ತಾನ ಹಾಗೂ ಭಾರತ ನಡುವಿನ ಯುದ್ಧ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಯಾವುದೇ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಯಾವುದೇ ರೀತಿ ಆತಂಕದ ವಾತಾವರಣವಿಲ್ಲ. ಆದರೂ ಸರ್ಕಾರದ ನಿರ್ದೇಶನದಂತೆ ಎಲ್ಲ ರೀತಿಯ ಅಗತ್ಯ ಕ್ರಮ ಕೈಗೊಳ್ಳ ಲಾಗಿದೆ. ಜೊತೆಗೆ ವಿವಿಧ ಇಲಾಖೆಗಳು ಯಾವ ರೀತಿ ಸನ್ನದ್ಧವಾಗಿರಬೇಕು ಎಂಬ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ತುರ್ತು ನಿಯಂತ್ರಣ ಕೊಠಡಿ ಸ್ಥಾಪಿಸಲಾಗುವುದು. ಜೊತೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಅಥವಾ ಅನುಮಾನಾಸ್ಪದ ಚಟುವಟಿಕೆಗಳು ಕಂಡು ಬಂದಲ್ಲಿ ಸಾರ್ವಜನಿಕರು ಸ್ಥಳೀಯ ಪೊಲೀಸ್ ಠಾಣೆ, ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಯುದ್ಧದ ಸಂದರ್ಭದಲ್ಲಿ ಯಾವ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜೊತೆಗೆ ಯುದ್ಧದ ಸಂದರ್ಭದಲ್ಲಿ ನಮ್ಮನ್ನು ನಾವು ಹೇಗೆ ರಕ್ಷಿಸಿಕೊಳ್ಳಬೇಕು ಹಾಗೂ ಗಾಯಗೊಂಡವರನ್ನು ಯಾವ ರೀತಿ ರಕ್ಷಿಸಬೇಕು ಮತ್ತು ಚಿಕಿತ್ಸೆ ಕೊಡಿಸಬೇಕು ಎಂಬ ಕುರಿತು ಚಿಕ್ಕಮಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಮಾಕ್ ಡ್ರಿಲ್ ನಡೆಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಪಿ ಡಾ. ವಿಕ್ರಮ ಅಮಟೆ, ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಉಪಸ್ಥಿತರಿದ್ದರು.

--- ಬಾಕ್ಸ್‌--ಧಾರ್ಮಿಕ ಕೇಂದ್ರಗಳ ಮೇಲೆ ನಿಗಾಚಿಕ್ಕಮಗಳೂರು ಜಿಲ್ಲೆ ಅತಿ ಸೂಕ್ಷ್ಮ ಜಿಲ್ಲೆಯಾಗಿರುವುದರಿಂದ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳ ಲಾಗಿದೆ. ಬಸ್ ನಿಲ್ದಾಣ, ರೈಲ್ವೇ ನಿಲ್ದಾಣ, ಪ್ರವಾಸಿ ತಾಣಗಳು, ಧಾರ್ಮಿಕ ಕ್ಷೇತ್ರಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಮ ಅಮಟೆ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಹೊರನಾಡು ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಇದಲ್ಲದೆ ಭದ್ರಾ ಜಲಾಶಯಕ್ಕೂ ಹೆಚ್ಚಿನ ಭದ್ರತೆ ಒದಗಿಸಿದ್ದೇವೆ. ಇನ್ನುಳಿದಂತೆ ಎಲ್ಲೆಡೆಯೂ ಪೊಲೀಸರು ನಿಗಾವಹಿಸಿ ದ್ದಾರೆ ಎಂದು ಹೇಳಿದರು.

ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಷೇಧಿತ ಸಂಘಟನೆಗಳೊಂದಿಗೆ ಗುರುತಿಸಿಕೊಂಡವರ ಬಗ್ಗೆ ವಿಶೇಷ ನಿಗಾ ವಹಿಸ ಲಾಗಿದೆ. ಅವರ ಚಲನವಲನದ ಜೊತೆಗೆ ಅವರು ಬಳಸುವ ಸಾಮಾಜಿಕ ಜಾಲತಾಣಗಳ ಮೇಲೆಯೂ ನಿಗಾ ಇಡ ಲಾಗಿದೆ. ಕೇವಲ ಪೊಲೀಸ್ ಇಲಾಖೆ ಮಾತ್ರವಲ್ಲದೆ ರಾಜ್ಯ ಮತ್ತು ಕೇಂದ್ರ ತನಿಖಾ ಸಂಸ್ಥೆಗಳೂ ಇಂಥವರ ಮೇಲೆ ನಿಗಾವಹಿಸಿವೆ ಎಂದು ಮಾಹಿತಿ ನೀಡಿದರು. 16 ಕೆಸಿಕೆಎಂ 2ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹಾಗೂ ಎಸ್‌ಪಿ ವಿಕ್ರಮ ಅಮಟೆ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ