ಸಮನ್ವಯ ಇಲಾಖೆಗಳಿಗೂ ವಿಪತ್ತು ನಿರ್ವಹಣೆ ಅರಿವು ಅಗತ್ಯ

KannadaprabhaNewsNetwork |  
Published : Mar 13, 2026, 02:00 AM IST
ಪೋಟೋ 1 * 2 : ದಾಬಸ್‍ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಕಾರ್ಖಾನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಂದಾಲ್ ಅಲ್ಯುಮಿನಿಯಂ ಲಿಮಿಟೆಡ್ ಹಾಗೂ ಗ್ಯೇಲ್ ಗ್ಯಾಸ್ ಲಿಮಿಟೆಡ್ ರವರ ಸಹಯೋಗದೊಂದಿಗೆ ನಡೆದ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ನಡೆಸಲಾಯಿತು. | Kannada Prabha

ಸಾರಾಂಶ

ದಾಬಸ್‍ಪೇಟೆ: ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು

ದಾಬಸ್‍ಪೇಟೆ: ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ತಿಳಿಸಿದರು.

ದಾಬಸ್‍ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಕಾರ್ಖಾನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಉದ್ದೇಶಿಸಿ ಅವರು ಮಾತನಾಡಿದರು.

ನೈಸರ್ಗಿಕ ವಿಕೋಪಗಳ, ಅಪಾಯಕಾರಿ ಕಾರ್ಖಾನೆಗಳಲ್ಲಿ ಆಗುವಂತಹ ದುರಂತ, ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆ ಅಧಿಕಾರಿಗಳಿಗೆ ಅರಿವಿರಬೇಕು. ಕಾರ್ಖಾನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಸಂದರ್ಭ ಬಂದರೂ ಸಮನ್ವಯ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು ಎಂದರು.

ಕಾರ್ಖಾನೆಗಳಲ್ಲಿ ಘಟಿಸುವ ರಾಸಾಯನಿಕ ಸೋರಿಕೆಯಂತಹ ಘಟನೆಯಿಂದ ಕಾರ್ಖಾನೆ ಸಿಬ್ಬಂದಿಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಹಾನಿ ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ, ನಿರ್ವಹಣೆ ಮಾಡುವ ಜ್ಞಾನ ಅಧಿಕಾರಿ, ಸಿಬ್ಬಂದಿಗೆ, ಕಾರ್ಖಾನೆಗಳಿಗೆ ಇರಬೇಕು. ಭೂಪಾಲ್ ಅನಿಲ ದುರಂತ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಖಾನೆಗಳಲ್ಲಿ ಸಾರ್ವಜನಿಕರಿಗೆ ಅರಿವು ಮಾಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ ಎಂದರು.

ನೈಜ ಘಟನೆಯಂತೆ ರಾಸಾಯನಿಕ ಸೋರಿಕೆ ಮಾಕ್ ಡ್ರಿಲ್: ಕಾರ್ಖಾನೆ ಆವರಣದಲ್ಲಿ ಅಣಕು ಡ್ರಿಲ್ ಸಂಕೀರ್ಣ ಕೈಗಾರಿಕಾ ತುರ್ತು ಸನ್ನಿವೇಶ ಅನುಕರಿಸಿತು. ಇದರಲ್ಲಿ ಉತ್ಖನನ ಕೆಲಸದ ಸಮಯದಲ್ಲಿ ಪಿಎನ್ ಜಿ ಪೈಪ್‍ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಗಿದ್ದರ ಪರಿಣಾಮ ಅನಿಲ ಸೋರಿಕೆ ಮತ್ತು ಸ್ಥಿರ ದಹನದಿಂದ ಬೆಂಕಿ ಉಂಟಾಯಿತು. ಅದೇ ಸಮಯದಲ್ಲಿ, ಎಲ್ ಪಿಜಿ ನಿಲ್ದಾಣದಲ್ಲಿ ಎಲ್ ಪಿಜಿ ಟ್ಯಾಂಕರ್ ಇಳಿಸುವ ಕಾರ್ಯಾಚರಣೆಯಲ್ಲಿ ಮೆದುಗೊಳವೆ ಸೋರಿಕೆ ಉಂಟಾಗಿ ಉಗಿ ಮೋಡ ರೂಪಿಸಿತು, ಇದು ಆವಿ ಮೋಡ ಸ್ಫೋಟಕ್ಕೆ ಕಾರಣವಾಯಿತು. ಪ್ರಥಮ ಚಿಕಿತ್ಸೆ ಅಗತ್ಯವಿರುವ 5 ಜನರು, ಗಂಭೀರ ಸುಟ್ಟ ಗಾಯಗಳೊಂದಿಗೆ 5 ಜನರು ಮತ್ತು 10 ಜನರು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿದೆ. ತಕ್ಷಣ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಿ 400 ರಿಂದ 500 ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕರಾದ ನರಸಿಂಹ ಮೂರ್ತಿ, ತಿಮ್ಮರಾಜು, ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್‍ನಿಂದ ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ಎಂ.ಸತೇಶ್ ಕುಮಾರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್‌ಡಿಆರ್‌ಎಫ್ ಅಗ್ನಿಶಾಮಕದಳ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಪೋಟೋ 1 * 2 :

ದಾಬಸ್‍ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್ ಕಾರ್ಖಾನೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ನಡೆಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಂಸ್ಕೃತಿಕ ಜೀವನದ ಮೇಲೆ ಪ್ರಭಾವ ಬೀರಿದ ದಾಸ ಸಾಹಿತ್ಯ
ನಾಳೆ ಜಿಲ್ಲಾದ್ಯಂತ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್