ಕೊಡಗು ವೈದ್ಯಕೀಯ ಕಾಲೇಜಿನಲ್ಲಿ ವಿಪತ್ತು ನಿರ್ವಹಣಾ ತರಬೇತಿ ಶಿಬಿರ

KannadaprabhaNewsNetwork |  
Published : Mar 15, 2026, 02:45 AM IST
 | Kannada Prabha

ಸಾರಾಂಶ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ‘ಯುವ ಆಪದಾ ಮಿತ್ರ ಯೋಜನೆ’ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಾ. 12 ರಂದು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟೀಯ ಸ್ವಯಂ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ಸಹಯೋಗದಲ್ಲಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾಲಯದ ಮಾರ್ಗದರ್ಶನದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯಲ್ಲಿ ‘ಯುವ ಆಪದಾ ಮಿತ್ರ ಯೋಜನೆ’ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮಾ. 12 ರಂದು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಂದರ್ಭ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅನನ್ಯ ವಾಸುದೇವ್ ಅವರು ಯುವ ಆಪತ್ ಮಿತ್ರ ಯೋಜನೆಯ ಮಹತ್ವ ಹಾಗೂ ವಿಪತ್ತು ಸಂದರ್ಭಗಳಲ್ಲಿ ಯುವಕರ ಪಾತ್ರದ ಬಗ್ಗೆ ವಿವರಿಸಿದರು. ಗ್ರಾಮೀಣ ಪೊಲೀಸ್ ಇನ್‌ಸ್ಪೆಕ್ಟರ್ ಚಂದ್ರಶೇಖರ್ ಅವರು ಕೊಡಗು ಜಿಲ್ಲೆಯಲ್ಲಿ ಆದ ವಿಪತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿಯ ಡೀನ್‌ ಮತ್ತು ನಿರ್ದೇಶಕರಾದ ಡಾ. ಲೋಕೇಶ್ ಎ.ಜೆ. ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಯಿತು. ಉಪ ಪ್ರಾಂಶುಪಾಲ ಡಾ. ಈಶಾ ಬಿ. ರಾವ್ ಉಪಸ್ಥಿತರಿದ್ದರು.ಈ ಕಾರ್‍ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಸಮುದಾಯ ವೈದ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ರಾಮಚಂದ್ರ ಕಾಮತ್ ಅವರು ಪ್ರಮುಖ ಪಾತ್ರ ವಹಿಸಿದ್ದರು.ರಾಷ್ಟೀಯ ಸ್ವಯಂ ಸೇವಾ ಯೋಜನೆ ವಿದ್ಯಾರ್ಥಿಗಳಿಗೆ ಈ ಮಹತ್ವದ ತರಬೇತಿ ನೀಡಲು ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಶಿವಕುಮಾರ್ ಅವರ‌ ತಂಡ ಆಗಮಿಸಿ ವಿಪತ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳು ಹಾಗೂ ಸುರಕ್ಷತಾ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಕೊಡಗು ಜಿಲ್ಲೆಯ ವಿವಿಧ ಕಾಲೇಜುಗಳಿಂದ ಸುಮಾರು 100 ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದರು. ಈ ತರಬೇತಿ ಮಾ. 11ರಿಂದ 17ರವರೆಗೆ ನಡೆಯುತ್ತದೆ. ತರಬೇತಿ ಯುವಕರಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಹೆಚ್ಚಿಸುವುದರಲ್ಲಿ ಹಾಗೂ ಸಮಾಜ ಸೇವೆಯ ಮನೋಭಾವ ಬೆಳೆಸುವುದರಲ್ಲಿ ಮಹತ್ವದ ಪಾತ್ರ ವಹಿಸುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ ಕೃಷ್ಣಮಠಕ್ಕೆ ತಿರುವಂತಪುರ ಉಪ ಮೇಯರ್ ಭೇಟಿ
ಮಹಿಳೆಯಲ್ಲಿರುವ ಪುನಶ್ಚೇತನ ಶಕ್ತಿ ಸಮಾಜಕ್ಕೆ ಸದ್ಬಳಕೆಯಾಗುತ್ತಿಲ್ಲ-ಪಿಎಸ್‌ಐ ಭಾರತಿ