ಶಿರಾ: ನಗರದ ಶ್ರೀ ಗವಿ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯನ್ನು ಶನಿವಾರ ಶೋಭಾಯಾತ್ರೆ ಕೈಗೊಂಡು ವಿಸರ್ಜನೆ ಮಾಡಲಾಯಿತು.
ನಗರದ ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಸುಮಾರು 25 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಎಸ್ಪಿ ಅಶೋಕ್.ಕೆ.ವಿ ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ನಗರದಾದ್ಯಂತ ಸುಮಾರು 700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ಮಾಡಿದ್ದರು.
ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಸ್ಪಟಿಕಪುರಿ ಸಂಸ್ಥಾನಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ, ಶಾಸಕ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ, ಆರ್.ಉಗ್ರೇಶ್, ಜೀಷಾನ್ ಮೊಹಮದ್, ಲಕ್ಷ್ಮೀಕಾಂತ್, ಎಸ್.ಆರ್.ಗೌಡ, ಬಿ.ಕೆ.ಮಂಜುನಾಥ್, ಬಿ.ಅಂಜಿನಪ್ಪ, ಪೂಜಾ ಪೆದ್ದರಾಜು, ಪಿ.ಆರ್.ಮಂಜುನಾಥ್, ಆರ್.ರಾಮು, ಅಜಯ್‍ಕುಮಾರ್, ರಾಧಾಕೃಷ್ಣ ಭಾಗವಹಿಸಿದ್ದರು.ಶಿರಾದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವವು ಅತ್ಯಂತ ಯಶಸ್ವಿಯಾಗಿ ನೆರವೇರಿದೆ. ಎಲ್ಲರೂ ಒಗ್ಗೂಡಿ ಗಣಪತಿ ವಿಸರ್ಜನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ್ದಾರೆ. ಸುಮಾರು 30 ಸಾವಿರಕ್ಕೂ ಹೆಚ್ಚು ಜನರು ಬೃಹತ್ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
- ಟಿ.ಬಿ.ಜಯಚಂದ್ರ ಶಾಸಕ