ಕನ್ನಡಪ್ರಭ ವಾರ್ತೆ ಬೆಂಗಳೂರು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೆ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದಕ್ಕೆ ನಿಷೇಧವಿದೆ. ಆದರೂ, ಎಲ್ಲ ರಾಜಕೀಯ ಪಕ್ಷಗಳ ನಾಯಕರು, ಸಂಘ-ಸಂಸ್ಥೆಗಳು ಎಲ್ಲೆಂದರಲ್ಲಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಫ್ಲೆಕ್ಸ್-ಬ್ಯಾನರ್‌ಗಳ ಹಾವಳಿ ತಪ್ಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹಿಂದೆಯೂ ಸೂಚನೆ ನೀಡಿದ್ದೇನೆ. ಆದರೂ, ಅದು ಸಾಧ್ಯವಾಗಿಲ್ಲ. ನಮ್ಮ ಪಕ್ಷದವರೇ ಫ್ಲೆಕ್ಸ್-ಬ್ಯಾನರ್ ಹಾಕಿದರೂ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಫ್ಲೆಕ್ಸ್-ಬ್ಯಾನರ್ ಹಾಕುವುದನ್ನು ತಡೆಯದಿದ್ದರೆ, ಅಲ್ಲಿನ ಎಆರ್‌ಒಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಘನತ್ಯಾಜ್ಯ ಸಂಸ್ಕರಣೆಗೆ4 ಕಡೆ ಘಟಕ:ಘನತ್ಯಾಜ್ಯ ಸಂಗ್ರಹಕ್ಕೆ ಸಾರ್ವಜನಿಕರಿಂದ 100 ರು. ಶುಲ್ಕ ವಸೂಲಿ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಘನತ್ಯಾಜ್ಯ ನಿರ್ವಹಣೆ ನಿಯಮದಂತೆ ಶುಲ್ಕ ವಿಧಿಸಲಾಗುತ್ತಿದೆ. ಅದು ಸಾರ್ವಜನಿಕರು ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡೇ ಶುಲ್ಕ ನಿಗದಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ ಸಮಸ್ಯೆಯಾಗದಂತೆ ತಡೆಯಲು 4 ಕಡೆ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲಾಗುತ್ತಿದೆ. ಅಲ್ಲಿ ತ್ಯಾಜ್ಯದಿಂದ ವಿದ್ಯುತ್, ಸಿಎನ್‌ಜಿ ಉತ್ಪಾದನೆ ಮಾಡಲಾಗುವುದು ಎಂದರು.