ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ: ಡಾ. ಕೃಷ್ಣ

KannadaprabhaNewsNetwork |  
Published : Mar 06, 2026, 03:00 AM IST
ಆಹಾರ | Kannada Prabha

ಸಾರಾಂಶ

ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ವಿತರಣೆಯ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವಿರುದ್ಧ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಶಿಸ್ತುಕ್ರಮ ಕೈಗೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯ ಶಾಲೆಗಳಲ್ಲಿ ಬಿಸಿಯೂಟ, ವಿದ್ಯಾರ್ಥಿ ನಿಲಯಗಳಲ್ಲಿ ಊಟದ ವ್ಯವಸ್ಥೆ ಹಾಗೂ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳ ವಿತರಣೆಯ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಸಿಬ್ಬಂದಿ ವಿರುದ್ಧ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಮೂಲಕ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್. ಕೃಷ್ಣ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ಮಾತನಾಡಿದರು.

ಕಾರವಾರದ ಬಜಾರ್ ಶಾಲೆಯಲ್ಲಿ, ಶಾಲಾ ಮಕ್ಕಳಿಗೆ ಬಿಸಿಯೂಟ ವಿತರಣೆ ಮತ್ತು ಸ್ವಚ್ಛತೆ ಕಾಪಾಡುವ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸಿದ ಶಿಕ್ಷಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದು, ಈ ಕುರಿತಂತೆ ಅಧಿಕಾರಿಗಳು ಸಂಬಂದಪಟ್ಟ ಶಿಕ್ಷಕರಿಗೆ 15 ದಿನಗಳ ಕಡ್ಡಾಯ ರಜೆಯ ಶಿಕ್ಷೆ ನೀಡಿದ್ದು, ಅಮದಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡದ ಸಿಬ್ಬಂದಿಗೆ ಮತ್ತು ಕ್ರಿಮ್ಸ್‌ನಲ್ಲಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನೀಡುವ ಆಹಾರದ ಕುರಿತಂತೆ ನಿರ್ಲಕ್ಷ್ಯ ತೋರಿದ ವೈದ್ಯರಿಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೂಲಕ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದರು.

ವಿವಿಧೆಡೆ ಭೇಟಿ ಸಂದರ್ಭದಲ್ಲಿ ಕಂಡುಬರುವ ನ್ಯೂನತೆಗಳ ಕುರಿತಂತೆ ವರದಿ ಸಿದ್ದಪಡಿಸಿದ್ದು, ಈ ವರದಿಯಲ್ಲಿನ ಲೋಪಗಳನ್ನು ಅಧಿಕಾರಿಗಳು ಸರಿಪಡಿಸುವ ಕಾರ್ಯ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಆಹಾರದ ಹಕ್ಕಿನ ಸಂಪೂರ್ಣ ಪ್ರಯೋಜನ ದೊರೆಯುವಂತೆ ಮಾಡಬೇಕು ಎಂದರು.

ಆಹಾರ ಸಿದ್ಧಪಡಿಸುವ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು, ಗೋದಾಮುಗಳಲ್ಲಿ ಆಹಾರ ಶೇಖರಣೆಯನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಿಸಬೇಕು, ಆಹಾರ ತಯಾರಿಕಾ ಮಾದರಿಗಳನ್ನು ಆಗಾಗ್ಗೆ ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು, ಉತ್ತಮ ಗುಣಮಟ್ಟ ಆಹಾರವನ್ನು ಸರಬರಾಜು ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಮಾತನಾಡಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ವತಿಯಿಂದ ನಡೆಸಿರುವ ಪರಿಶೀಲನಾ ವೇಳೆಯಲ್ಲಿ ಕಂಡುಬಂದಿರುವ ಲೋಪಗಳನ್ನು ಆದ್ಯತೆಯಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈ ಎಲ್ಲಾ ಲೋಪಗಳ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್‌ರಾವ್, ಮಾರುತಿ ಎಂ. ದೊಡ್ಡಲಿಂಗಣ್ಣನವರ, ಎ.ರೋಹಿಣಿ ಪ್ರಿಯ, ಕೆ.ಎಸ್. ವಿಜಯಲಕ್ಷ್ಮೀ, ಆಹಾರ ಇಲಾಖೆ ಉಪ ನಿರ್ದೇಶಕ ಮಂಜುನಾಥ ರೇವಣಕರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

11ರಿಂದ ಆರೋಗ್ಯ ಇಲಾಖೆ ಮುಷ್ಕರ, ಓಪಿಡಿ ಬಂದ್ !
ಕರಡಿ ದಾಳಿಗಳಿಗೆ 25ಕ್ಕೂ ಹೆಚ್ಚು ರೈತರು ಬಲಿ