ಆಹಾರ ವಿತರಣೆಯಲ್ಲಿ ಲೋಪ ಕಂಡರೆ ಶಿಸ್ತು ಕ್ರಮ

KannadaprabhaNewsNetwork |  
Published : Aug 15, 2026, 02:15 AM IST
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ವಿವಿಧ ಇಲಾಖೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್.ಕೃಷ್ಣ ಮಾತನಾಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಹೇಳಿದರು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ವಿವಿಧ ಇಲಾಖೆಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನ್ವಯ ಆಹಾರ ಪ್ರತಿಯೊಬ್ಬ ಬಡವರಿಗೆ ನಿರ್ಗತಿಕರಿಗೆ ಸರ್ಕಾರ ದುರ್ಬಲರಿಗೆ, ಮಕ್ಕಳಿಗೆ ಮಹಿಳೆಯರಿಗೆ ಆಹಾರ ಒದಗಿಸುವುದು ಮೂಲ ಕರ್ತವ್ಯ, ಪ್ರತಿಯೊಬ್ಬರಿಗೂ ಆಹಾರದ ಹಕ್ಕು ಇದೆ ಎಂದು ಹೇಳಿದರು.

ಸರ್ಕಾರಿ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಿಗೆ ಭೇಟಿದಾಗ ಸಮಸ್ಯೆಗಳನ್ನು ಅವಲೋಕಿಸಿ ಸಂಬಂದಪಟ್ಟ ಅಧಿಕಾರಿಗಳಿಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು,ಬಿಸಿನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆ, ಸಮರ್ಪಕವಾಗಿ ಕಲ್ಪಿಸಬೇಕು. ದುರಸ್ಥಿ ಬಾಗಿಲ ಸರಿಪಡಿಸುವಿಕೆ, ಸೊಳ್ಳೆಪರದೆ, ಗ್ರಂಥಾಲಯ ವ್ಯವಸ್ಥೆ, ಗುಣಮಟ್ಟದ ಆಹಾರದ ಜೊತೆಗೆ ಶುಚಿತ್ವವನ್ನು ಕಾಪಾಡಬೇಕು ಎಂದು ತಿಳಿಸಿದರು.

ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿ, ರಾಗಿ, ಗೋಧಿಯನ್ನು ಹೆಚ್ಚಾಗಿ ಶೇಖರಣೆ ಮಾಡಿರುವುದು ಕಂಡುಬಂದಿದೆ. ನ್ಯಾಯಬೆಲೆ ಅಂಗಡಿಯವರು ಗ್ರಾಹಕರ ಜೊತೆ ಸಂಯಮದಿಂದ ಮಾತನಾಡಬೇಕು. ಉಗ್ರಾಣದಲ್ಲಿ ಸ್ವಚ್ಚತೆ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ರಸಗೊಬ್ಬರ, ಔಷಧಿಗಳ ದಾಸ್ತಾ ಸಮರ್ಪಕವಾಗಿ ನಿರ್ವಹಿಸಬೇಕು.ವಯೋವೃದ್ಧರಿಗೆ ಸರಿಯಾದ ಸಮಯಕ್ಕೆ ಪೆನ್ಷನ್ ನೀಡಬೇಕು, ರೈತರನ್ನ ಕಚೇರಿಗಳಿಗೆ ಅಲೆದಾಡಿಸಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಾಸ್ಟೆಲ್ ಗಳಲ್ಲಿ ಅಡುಗೆ ತಯಾರಿಸುವವರಿಗೆ, ಬಡಿಸುವವರಿಗೆ ಹಾಗೂ ಅಂಗನವಾಡಿ, ಶಾಲೆ ಕಾಲೇಜುಗಳಲ್ಲಿ ಅಡುಗೆ ಮಾಡುವ ಎಲ್ಲರಿಗೂ ಕಡ್ಡಾಯವಾಗ ರಕ್ತ ಪರೀಕ್ಷೆ ಮಾಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲಾ ಇಲಾಖೆಯ ಅಧಿಕಾರಿಗಳು ಪಾರದರ್ಶಕತೆಯಿಂದ ಜವಾಬ್ದಾರಿಯಿಂದ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಜಿಲ್ಲೆಯಲ್ಲಿ ಆ.11 ರಿಂದ 13 ವರೆಗೆ ನಾಲ್ಕು ತಾಲೂಕಿನ ವಿವಿಧ ಭಾಗಗಳಲ್ಲಿ ಸರ್ಕಾರಿ ಆಸ್ಪತ್ರೆ, ಸರ್ಕಾರಿ ಶಾಲಾ ಕಾಲೇಜು, ವಿದ್ಯಾರ್ಥಿ ನಿಲಯಗಳಿಗೆ, ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ಸುರಕ್ಷತೆ, ಸ್ವಚ್ಚತೆ ಬಗ್ಗೆ ಪರಿಶೀಲನೆ ಕೈಗೊಂಡಿದ್ದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ.ಎನ್‌ ಅನುರಾಧ, ಸಿ.ಎ.ಒ ಡಾ. ವಾಸಂತಿ ಅಮರ್‌, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್‌ ರಾವ್‌, ಮಾರುತಿ ಎಂ ದೊಡ್ಡಲಿಂಗಣ್ಣವರ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

14ಕೆಡಿಬಿಪಿ1-

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ ಮಾತನಾಡಿದರು. ಜಿಲ್ಲಾಧಿಕಾರಿ ಡಾ. ಕೆ.ಎನ್‌ ಅನುರಾಧ, ಸಿ.ಎ.ಒ ಡಾ. ವಾಸಂತಿ ಅಮರ್‌, ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್‌ ರಾವ್‌ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಯುಸಿ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ: ಬಸವರಮಾನಂದ ಸ್ವಾಮೀಜಿ
ಬಾಟಂ ಮೇಲೆ..ಭಕ್ತರು ಜೀವನದಲ್ಲಿ ಸದ್ವಿಚಾರಗಳನ್ನು ಅಳವಡಿಸಿಕೊಳ್ಳಿ