ಪ್ರತಿಭಟಿಸಿದ್ರೆ ಶಿಸ್ತು ಕ್ರಮ: ವೈದ್ಯರಿಗೆ ಸರ್ಕಾರ ಎಚ್ಚರಿಕೆ

KannadaprabhaNewsNetwork |  
Published : Feb 27, 2026, 02:00 AM IST
ಡಾಕ್ಟರ್‌ | Kannada Prabha

ಸಾರಾಂಶ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆಯ ಎಲ್ಲ ವೈದ್ಯರು, ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಆರೋಗ್ಯ ಸೇವೆಗಳಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರೆ ಶಿಸ್ತು ಕ್ರಮ ಕೈಗೊಳ್ಳುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಆರೋಗ್ಯ ಇಲಾಖೆಯ ಎಲ್ಲ ವೈದ್ಯರು, ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ ಆರೋಗ್ಯ ಸೇವೆಗಳಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರೆ ಶಿಸ್ತು ಕ್ರಮ ಕೈಗೊಳ್ಳುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಬಡ್ತಿ, ವೇತನ ಪರಿಷ್ಕರಣೆ ಸೇರಿ ಸೇವಾ ಸಂಬಂಧಿತ ಬೇಡಿಕೆಗಳ ಈಡೇರಿಕೆ ಕುರಿತು ಪ್ರತಿಭಟನೆ ನಡೆಸಿದರೆ ಮುಲಾಜಿಲ್ಲದೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಆರೋಗ್ಯ ಸೇವೆಗಳಿಗೆ ಅಡ್ಡಿಪಡಿಸದಂತೆ ನೌಕರರು ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಕಾನೂನಿನ ಅಡಿ ಬಗೆಹರಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಸೂಚಿಸಿದ್ದಾರೆ.

ವೈದ್ಯರು ಹಾಗೂ ಇತರೆ ಸಿಬ್ಬಂದಿ ಸಾರ್ವಜನಿಕ ಆರೋಗ್ಯ ಸೇವೆಯ ನಿರಂತರತೆ ಹಾಗೂ ರೋಗಿಗಳ ಆರೋಗ್ಯ ಕಾಪಾಡುವ ಮಹತ್ವದ ಜವಾಬ್ದಾರಿ ಹೊಂದಿರುವುದರಿಂದ ಸಾಮೂಹಿಕ ಮುಷ್ಕರದಂಥ ಕ್ರಮಗಳಿಂದ ಹಿಂದೆ ಸರಿಯಬೇಕು. ಹಾಗೇನಾದರೂ ಕೆಲಸಕ್ಕೆ ಗೈರುಹಾಜರಾಗಿ ಮುಷ್ಕರ ಕೈಗೊಂಡು ಅದರಿಂದ ಸಾರ್ವನಿಕರಿಗೆ ತೊಂದರೆ ಆದಲ್ಲಿ ಅಂಥವರ ವಿರದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲ ವೃಂದ ಸಂಘಗಳು ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ, ಮುಂಬಡ್ತಿ, ಕರ್ತವ್ಯದ ಬಳಿಕ ಖಾಸಗಿ ವ್ಯವಸ್ಥೆಯಡಿ ಚಿಕಿತ್ಸೆಗೆ ಅವಕಾಶ ಸೇರಿ 14 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದು, ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಘೋಷಿಸಿವೆ. ಈ ಬೇಡಿಕೆಗಳಿಗೆ ಸಂಬಂಧಿಸಿ ಕೈಗೊಂಡ ಕ್ರಮಗಳನ್ನು ಇಲಾಖೆ ಆಯುಕ್ತರು ವಿವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಸಿಮೆಂಟ್ ಮಂಜು
ಸುಲಲಿತ ವಾಣಿಜ್ಯ ಸಂಸ್ಕೃತಿಗೆ ರಾಜ್ಯ ಸರ್ಕಾರ ಸಂಕಲ್ಪ: ಎಂಬಿಪಾ