ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 62ನೇ ಕೆ.ವಿ.ಎಸ್. ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ವಿದ್ಯಾರ್ಥಿಗಳಲ್ಲಿ ಶಿಸ್ತು, ಶೈಕ್ಷಣಿಕ ಕಠಿಣತೆ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಕೇಂದ್ರೀಯ ವಿದ್ಯಾಲಯಗಳ ಪಾತ್ರ ಮಹತ್ವವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಹೇಳಿದರು.ಅವರು ಇತ್ತೀಚಿಗೆ ಅಲೆವೂರು ಪ್ರಗತಿ ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ 62ನೇ ಕೆ.ವಿ.ಎಸ್. ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಕೇಂದ್ರೀಯ ವಿದ್ಯಾಲಯ ವಿದ್ಯಾರ್ಥಿಯಾದ ತಾನು ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಅಲ್ಲಿಂದಲೇ ಪಡೆದ ಬಗ್ಗೆ ತಿಳಿಸಿದ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಸಾಧನೆಗಳನ್ನು ಮಾಡುವ ದೊಡ್ಡ ಕನಸು ಕಾಣುವಂತೆ ಮತ್ತು ಅದನ್ನು ನನಸು ಮಾಡಿಕೊಳ್ಳಲು ಪರಿಶ್ರಮ ಪಡುವಂತೆ ಪ್ರೇರೇಪಿಸಿದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಕರೀಂ ಖಾನ್ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವಲ್ಲಿ ಕೆ.ವಿ.ಎಸ್.ನ ಪಾತ್ರ, ಪರಂಪರೆ ಮತ್ತು ಸಾಧನೆಗಳನ್ನು ತಿಳಿಸಿದರು.ಇದೇ ಸಂದರ್ಭದಲ್ಲಿ 2023-24ರ ಸಿಬಿಎಸ್‌ಏ ಬೋರ್ಡ್ ನಡೆಸಿದ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ಸಂಸ್ಥೆಯ ವಿದ್ಯಾರ್ಥಿಗಳಾದ ಚಂದನಾ ಮತ್ತು ನಾಗಾರ್ಜುನ ಅವರ ಗಮನಾರ್ಹ ಸಾಧನೆಗಾಗಿ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಕಾರ್ಯಕ್ರಮಗಳು ಮತ್ತು ಭಾಷಣ ನಡೆಯಿತು. ಪ್ರಾಥಮಿಕ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ ನಡೆಯಿತು. ಶಿಕ್ಷಕ ರಾಗೇಶ್ ಎಂ. ವಂದಿಸಿದರು. ಶಿಕ್ಷಕಿ ರಿತು ಶರ್ಮಾ ಕಾರ್ಯಕ್ರಮ ನಿರೂಪಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.