
ಭಾಲ್ಕಿ: ಶ್ರಾವಣ ಮಾಸದ ಅಂಗವಾಗಿ ಪಟ್ಟಣ ಸೇರಿ ಬೀದರ್ ಜಿಲ್ಲೆಯಲ್ಲದೇ ನೆರೆಯ ರಾಜ್ಯದ 22 ಕಡೆಗಳಲ್ಲಿ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ತಿಳಿಸಿದರು.
ಪೂಜ್ಯರಿಂದ ವಚನ ದರ್ಶನ ಪ್ರವಚನ: ಪಟ್ಟಣದಲ್ಲಿ ಕಳೆದ ನಾಲ್ಕು ದಶಕಗಳಿಂದ ಶ್ರಾವಣ ಮಾಸದಲ್ಲಿ ನಿರಂತರವಾಗಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಪ್ರವಚನ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ತಿಳಿಸಿದರು.
ಈ ಬಾರಿಯು ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಪೂಜ್ಯರು ಪ್ರತಿದಿನ ವಚನ ದರ್ಶನ ವಿಷಯದ ಮೇಲೆ ಬೆಳಕು ಚೆಲ್ಲಲ್ಲಿದ್ದಾರೆ. ಜು.25ಕ್ಕೆ ಪ್ರವಚನ ಉದ್ಘಾಟನೆಗೊಳ್ಳಲಿದ್ದು ಪ್ರತಿದಿನ ಸಾಯಂಕಾಲ 6 ರಿಂದ 7 ಗಂಟೆ ವರೆಗೆ ಪ್ರವಚನದ ಮೂಲಕ ಅಧ್ಯಾತ್ಮದ ಜ್ಞಾನವನ್ನು ಧಾರೆಯೆರಯಲ್ಲಿದ್ದಾರೆ. ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಮಹಾಲಿಂಗ ಸ್ವಾಮೀಜಿ, ಪ್ರವಚನ ಸೇವಾ ಸಮಿತಿ ಅಧ್ಯಕ್ಷ ಗುಂಡಪ್ಪ ಸಂಗಮಕರ್ ಇದ್ದರು.