ಕನ್ನಡಪ್ರಭ ವಾರ್ತೆ ಗದಗ
ಗುರುವಾರ ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಯೋಗವು ಗದಗ ಜಿಲ್ಲಾ ಪ್ರವಾಸ ಕೈಗೊಂಡಿದೆ. ಬುಧವಾರ ಅಂಗನವಾಡಿ, ಆಸ್ಪತ್ರೆ, ಎಫ್‌ಸಿಐ ಗೋಡೌನ್, ವಿವಿಧ ಇಲಾಖೆಗಳ ಹಾಸ್ಟೆಲ್ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಲಾಗಿದೆ. ಅನರ್ಹ ಎಪಿಎಲ್, ಬಿಪಿಎಲ್ ಕಾರ್ಡ್ ರದ್ದುಪಡಿಸುವ ಭರದಲ್ಲಿ ಅರ್ಹ ಬಡವರ ಬಿಪಿಎಲ್ ಕಾರ್ಡ್‌ಗಳನ್ನೂ ರದ್ದು ಮಾಡಿರುವ ಪ್ರಕರಣಗಳು ಗಮನಕ್ಕೆ ಬಂದಿವೆ ಎಂದರು.
ಅನ್ನಭಾಗ್ಯ ಯೋಜನೆಯಡಿ ಕೇಂದ್ರದ 5 ಕೆಜಿ ಹಾಗೂ ರಾಜ್ಯದ 5 ಕೆಜಿ ಸೇರಿ ಪ್ರತಿ ಫಲಾನುಭವಿಗೆ ಒಟ್ಟು 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ನ್ಯಾಯಬೆಲೆ ಅಂಗಡಿಗಳು ತಿಂಗಳಿಗೆ 26 ದಿನ ತೆರೆದಿರಬೇಕು. ಕಡಿಮೆ ಪ್ರಮಾಣದ ಅಕ್ಕಿ ವಿತರಿಸಿದರೆ ಅಥವಾ ಅಕ್ಕಿ ವಿತರಣೆಗೆ ಹಣ ಕೇಳಿದರೆ ಶಿಸ್ತು ಕ್ರಮ ಜರುಗಿಸಲಾಗುವುದು. ಅನ್ನಭಾಗ್ಯ ಅಕ್ಕಿ ಕಾಳಸಂತೆ ಸೇರದಂತೆ ನಿಗಾ ವಹಿಸಲಾಗುವುದು. ಅಂಗನವಾಡಿ ಪೌಷ್ಟಿಕ ಆಹಾರ, ವೃದ್ಧಾಪ್ಯ ಹಾಗೂ ಅಂಗವಿಕಲರ ಮಾಸಾಶನ ವಿತರಣೆ, ಕೃಷಿ ಸಬ್ಸಿಡಿ ಉಪಕರಣಗಳು, ಹೋಟೆಲ್ ಮತ್ತು ಹಾಸ್ಟೆಲ್‌ಗಳಲ್ಲಿ ಕಳಪೆ ಆಹಾರ ಪೂರೈಕೆ ಕಂಡುಬಂದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಕುಂದುಕೊರತೆ ಕೋಶ ಅಥವಾ ಆಯೋಗಕ್ಕೆ ಸಾರ್ವಜನಿಕರು ದೂರು ನೀಡಬಹುದು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತರಾವ್, ಮಾರುತಿ ಎಂ. ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ, ಕೆ.ಎಸ್. ವಿಜಯಲಕ್ಷ್ಮಿ, ಆಹಾರ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ದೊಡ್ಡಮನಿ ಉಪಸ್ಥಿತರಿದ್ದರು.