ಕನ್ನಡಪ್ರಭ ವಾರ್ತೆ ಮೈಸೂರು
ಕಲಾಮಂದಿರದಲ್ಲಿ ಗುರುವಾರ ನಡೆದ ಕುವೆಂಪುನಗರ ಜ್ಯೋತಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವದಲ್ಲಿ ಮಾತನಾಡಿದ ಅವರು, ಅನುದಾನಿತ ಶಾಲೆಗಳಲ್ಲಿ 40 ವಿದ್ಯಾರ್ಥಿಗಳಿಗೆ ಒಬ್ಬರು ಶಿಕ್ಷಕರಿರಬೇಕು ಎನ್ನುವವರು ಸರ್ಕಾರಿ ಶಾಲೆಗಳಲ್ಲಿ ಐವರು ವಿದ್ಯಾರ್ಥಿಗಳಿದ್ದರೂ ಒಬ್ಬ ಶಿಕ್ಷಕರನ್ನು ಮುಂದುವರೆಸುತ್ತಾರೆ. ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೆ ಶಿಕ್ಷಕರ ಹುದ್ದೆಗಳನ್ನೇ ಬೇರೆಡೆಗೆ ಸ್ಥಳಾಂತರಿಸುತ್ತಾರೆ ಎಂದರು.
ಈ ದ್ವಿಮುಖ ನೀತಿಯಿಂದಾಗಿ ಅನುದಾನಿತ ಕನ್ನಡ ಮಾಧ್ಯಮ ಶಾಲೆಗಳನ್ನು ನಡೆಸುವುದು ದುಸ್ತರವಾಗಿದೆ. ಕನ್ನಡ ಉಳಿಸಿ, ಬೆಳೆಸಬೇಕು. ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂದು ಹೇಳುವ ಸರ್ಕಾರ ಈ ರೀತಿಯ ತಾರತಮ್ಯನೀತಿಯನ್ನು ಕೈಬಿಡಬೇಕು ಎಂದು ಅವರು ಮನವಿ ಮಾಡಿದರು.ನಮ್ಮದು ಅನುದಾನಿತ ಕನ್ನಡ ಮಾಧ್ಯಮ ಶಾಲೆಯಾಗಿದ್ದು, ವಿದ್ಯಾರ್ಥಿಗಳ ಸಂಖ್ಯೆ 150ಕ್ಕೆ ಇಳಿದಿದೆ. ಇದರಿಂದ ಏಳು ಮಂದಿ ಇದ್ದ ಅನುದಾನಿತ ಶಿಕ್ಷಕರ ಸಂಖ್ಯೆಯನ್ನು ಕೂಡ ಕಡಿಮೆ ಮಾಡಲಾಗಿದೆ. ಆದರೆ ಆಡಳಿತ ವರ್ಗವೇ ಶಿಕ್ಷಕರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಪೋಷಕರ ಸಹಕಾರ ಬಹುಮುಖ್ಯ, ಎಲ್ಲಾ ರೀತಿಯ ಚಟುವಟಿಕೆಗಳನ್ನು ನಡೆಸುತ್ತಾ ಶೇ.100 ಫಲಿತಾಂಶ ಪಡೆಯುತ್ತಿದೆ ಎಂದು ಅವರು ಹೇಳಿದರು.
ಸಂಸ್ಥೆಯ ಅಧ್ಯಕ್ಷ ಡಾ.ಮುದ್ದುವೀರಪ್ಪ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕರಾದ ಸುನಂದಮ್ಮ ಮರಿಬಸವಸ್ವಾಮಿ, ಎನ್ . ಶೈಲೇಶ್ ಕುಮಾರ್, ಎಸ್. ನಟರಾಜು, ಸುಧಾಕರ್, ಪ್ರಣಮ್ಯ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷೆ ಸವಿತಾ ಪಿ. ಪುಟ್ಟೇಗೌಡ, ಪಿಯು ಕಾಲೇಜು ಪ್ರಾಂಶುಪಾಲ ಡಾ.ಭರತ್ ರಾಜ್ ಮುಖ್ಯ ಅತಿಥಿಗಳಾಗಿದ್ದರು.