-ಜಗಳೂರು ಪಪಂ ಅಧ್ಯಕ್ಷ ನವೀನ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗದ್ದಲ
ಕನ್ನಡ ಪ್ರಭವಾರ್ತೆ ಜಗಳೂರು
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ವಿಶೇಷ ಸಾಮಾನ್ಯ ಸಭೆಯೂ ಅನುದಾನ ಹಂಚಿಕೆ ವಿಚಾರಕ್ಕೆ ಸಂಬಂಧಿಸಂತೆ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಏರ್ಪಟ್ಟ ಗೊಂದಲದಿಂದ ಸೋಮವಾರ ನಡೆದ ವಿಶೇಷ ಸಾಮಾನ್ಯ ಸಭೆ ರದ್ದುಗೊಂಡಿತು.ಪ.ಪಂ ಅಧ್ಯಕ್ಷ ನವೀನ್‌ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಆರಂಭಗೊಂಡಿತು. ಆದರೆ, ಎರಡು ಪಕ್ಷದ ಸದಸ್ಯರು ಮುಸುಕಿನ ಗುದ್ದಾಟದಿಂದ ಸಭೆಯ ಆರಂಭದಲ್ಲಿಯೇ ಮೊಟಕುಗೊಂಡಿತು.
ಪ.ಪಂ ಅಧ್ಯಕ್ಷ ನವೀನ್‌ಕುಮಾರ್ ಮಾತನಾಡಿ, ಪಟ್ಟಣದ 18 ವಾರ್ಡ್‌ಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಬೇಕಿದೆ. ರಸ್ತೆ, ಚರಂಡಿ, ಕುಡಿವ ನೀರು ಸೇರಿ ವಿವಿಧ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತರಲಾಗಿತ್ತು. ಕಳೆದ ಎರಡು ವರ್ಷಗಳಿಂದಲೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ. ಆದ್ದರಿಂದ ವಾರ್ಡ್‌ಗಳಲ್ಲಿ ಸದಸ್ಯರ ಬಗ್ಗೆ ಮತದಾರರು ಅಸಮಾಧಾನಗೊಂಡಿದ್ದಾರೆ. ಬಿಡುಗಡೆಯಾದ ಅನುದಾನವನ್ನು ಸರ್ವ ಸದಸ್ಯರಿಗೂ ಹಂಚಿಕೆ ಮಾಡಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಪ.ಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಉಪಾಧ್ಯಕ್ಷೆ ಲೋಕಮ್ಮ ಓಬಳೇಶ್, ಸದಸ್ಯರಾದ ಆರ್.ತಿಪ್ಪೇಸ್ವಾಮಿ, ಲಿಲೀತ ಶಿವಣ್ಣ, ನಿರ್ಮಲಕುಮಾರಿ ಇದ್ದರು.----
೯ಜೆಎಲ್ಆರ್ ಚಿತ್ರ೧