ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ: ಸಚಿವ ಶರಣಪ್ರಕಾಶ್ ಪಾಟೀಲ್

KannadaprabhaNewsNetwork |  
Published : Oct 18, 2026, 02:15 AM IST
 | Kannada Prabha

ಸಾರಾಂಶ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ತಮ್ಮ ಇಲಾಖೆಯ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಹಾಗೂ ಇಲ್ಲಿನ ಪ್ರತಿಭಟನೆಗಳ ಬಗ್ಗೆ ಮಾತನಾಡುವುದೇ ಕೆಲಸ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದಲ್ಲಿ ತಮ್ಮ ಇಲಾಖೆಯ ಕೆಲಸ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಹಾಗೂ ಇಲ್ಲಿನ ಪ್ರತಿಭಟನೆಗಳ ಬಗ್ಗೆ ಮಾತನಾಡುವುದೇ ಕೆಲಸ ಮಾಡಿಕೊಂಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದರು.ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿಚಾರಗಳಲ್ಲಿ ಕುಮಾರಸ್ವಾಮಿ ಪದೇಪದೇ ಮಧ್ಯಪ್ರವೇಶಿಸುತ್ತಿರುವುದು ಖಂಡನೀಯ. ರಾಜ್ಯ ಸರ್ಕಾರ ಹಾಗೂ ಪ್ರತಿಭಟನೆಗಳ ಬಗ್ಗೆ ಹೇಳಿಕೆ ನೀಡುವ ಬದಲು ಕೇಂದ್ರದಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಲಿ ಎಂದರು.ವಿದ್ಯಾರ್ಥಿಗಳ ಹೋರಾಟ ದೇಶವಿರೋಧಿಯಲ್ಲ: ಪರೀಕ್ಷೆಗಳಲ್ಲಿ ಪಾರದರ್ಶಕತೆ ಪ್ರಶ್ನಿಸಿ ವಿದ್ಯಾರ್ಥಿಗಳು ಹಾಗೂ ಯುವಕರು ನಡೆಸುತ್ತಿರುವ ಪ್ರತಿಭಟನೆಗೆ ರಾಜಕೀಯ ಬಣ್ಣ ನೀಡುವುದು ಸರಿಯಲ್ಲ. ತಪ್ಪನ್ನು ತಪ್ಪು ಎಂದು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಹಕ್ಕು. ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿರುವ ಯುವಕರನ್ನು ದೇಶವಿರೋಧಿಗಳು ಎಂದು ಬಿಂಬಿಸುವುದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುವುದು ಅವರ ಹಕ್ಕು ಎಂದು ಹೇಳಿದರು.ಉದ್ಯೋಗಕ್ಕಾಗಿ ಯುವಕರು ಬೀದಿಗಿಳಿದು ಹೋರಾಡುತ್ತಿದ್ದಾರೆ. ಪರೀಕ್ಷೆಯಲ್ಲಿ ಪಾರದರ್ಶಕತೆ ಕೇಳುವುದು ತಪ್ಪೇ? ತಪ್ಪನ್ನು ತಪ್ಪು ಎಂದು ಹೇಳುವುದು ಪ್ರಜಾಪ್ರಭುತ್ವದ ಹಕ್ಕು. ಪ್ರತಿಭಟಿಸುವ ಯುವಕರನ್ನು ದೇಶವಿರೋಧಿಗಳು ಎನ್ನುವುದು ಸರಿಯಲ್ಲ. ಅವರ ಹೋರಾಟವನ್ನು ಹತ್ತಿಕ್ಕುವ ಬದಲು ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದರು.ಕೇಂದ್ರದಿಂದ ಅನುದಾನ ತಾರತಮ್ಯ: ಕರ್ನಾಟಕಕ್ಕೆ ಬರಬೇಕಾದ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಬರಗಾಲದ ಸಂದರ್ಭದಲ್ಲಿ ರಾಜ್ಯಕ್ಕೆ ಬರಬೇಕಿದ್ದ ಪರಿಹಾರ ನೀಡಲು ವಿಳಂಬ ಮಾಡಲಾಗಿತ್ತು. ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋದ ಬಳಿಕ ಪರಿಹಾರ ಬಿಡುಗಡೆ ಮಾಡಲಾಯಿತು. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಹಿತ ಹಲವು ಇಲಾಖೆಗಳ ಅನುದಾನ ಇನ್ನೂ ಬರಬೇಕಿದೆ ಎಂದರು.ಕೇಂದ್ರದಲ್ಲಿ ಕೆಲಸ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ವಿರುದ್ಧ ಹೇಳಿಕೆ ನೀಡುವುದೇ ಕೆಲವರ ಕೆಲಸ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಬಿಜೆಪಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಸೋಲಿನ ಹತಾಶೆಯಿಂದ ಕರ್ನಾಟಕದ ಜನರ ವಿರುದ್ಧ ಸೇಡು ತೀರಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಶರಣಪ್ರಕಾಶ್ ಪಾಟೀಲ್ ಆರೋಪಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ್, ತಿಪ್ಪಣ್ಣಪ್ಪ ಕಮಕನೂರ್, ಚಂದ್ರಶೇಖರ್ ಪಾಟೀಲ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕಿರಣ್ ದೇಶಮುಖ್, ಮುಖಂಡರು ಇದ್ದರು.ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ನೀರಾವರಿ ವಿಚಾರವಾಗಿ ಸಂಬಂಧಿಸಿದ ಇಲಾಖೆಯೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಭೀಮಾ ನದಿಯ ಬಗ್ಗೆ ಕಾನೂನಾತ್ಮಕ ಚರ್ಚರ್ಗಳು ಈಗಾಗಲೇ ನಡೆದಿವೆ. ಮಹಾರಾಷ್ಟ್ರ ಸರ್ಕಾರಕ್ಕೂ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಧಾರ್ ತಿದ್ದುಪಡಿಗೆ ಅರಸೀಕೆರೆಯಲ್ಲಿ ಪರದಾಟ
ನವರಾತ್ರಿ ಅನ್ನ ಸಂತರ್ಪಣೆಗೆ ಹರಿದು ಬರುತ್ತಿರುವ ಹೊರೆ ಕಾಣಿಕೆ