ಕನ್ನಡಪ್ರಭ ವಾರ್ತೆ ನಂಜನಗೂಡು
ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿರುವ ಸಾರ್ವಜನಿಕರ ಜೊತೆಗೆ ಆಸ್ಪತ್ರೆಯಲ್ಲಿ ದೊರಕುತ್ತಿರುವ ಸೇವೆಯ ಬಗ್ಗೆ ಚರ್ಚಿಸಿ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸಲು ಸರ್ಕಾರ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯ ಸೌಕರ್ಯ ಒದಗಿಸಿದೆ, ನಂಜನಗೂಡು ಸರ್ಕಾರಿ ಆಸ್ಪತ್ರೆಗೆ ಈಗಾಗಲೇ ನೂತನವಾಗಿ ಆಧುನಿಕ ಸ್ಕ್ಯಾನಿಂಗ್ ಯಂತ್ರ ಸೇರಿದಂತೆ ಅಗತ್ಯ ಯಂತ್ರೋಪಕರಣ ಒದಗಿಸಲಾಗಿದೆ. ನಾನು ಭೇಟಿ ನೀಡಿದ್ದ ವೇಳೆ ರಾತ್ರಿ ಪಾಳಿಯಲ್ಲಿ ವೈದ್ಯರು ಲಭ್ಯವಿದ್ದು, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರ ಜೊತೆಗೆ ಚರ್ಚೆ ನಡೆಸಿ ಮಾಹಿತಿ ತಿಳಿದಿದ್ದೇನೆ ಎಂದರು.ಸರ್ಕಾರಿ ಆಸ್ಪತ್ರೆಗಳಲ್ಲಿ ದೊರಕುತ್ತಿರುವ ಚಿಕಿತ್ಸೆಯ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.