ವಂದೇ ಮಾತರಂ ಗೀತೆ ಪೂರ್ಣ ಹಾಡುವ ಕುರಿತು ಸದನದಲ್ಲಿ ಚರ್ಚೆ

KannadaprabhaNewsNetwork |  
Published : Sep 20, 2026, 03:30 AM IST
ಶಿವರಾಜ ತಂಗಡಗಿ | Kannada Prabha

ಸಾರಾಂಶ

ವಂದೇ ಮಾತರಂ ಗೀತೆ ಪೂರ್ತಿ ಹಾಡುವ ಕುರಿತು ಸದನದಲ್ಲಿ ಚರ್ಚೆ ಮಾಡಲಾಗುತ್ತದೆ. ಇದಕ್ಕಾಗಿ ಸಮಿತಿ ರಚಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಗಂಗಾವತಿ: ವಂದೇ ಮಾತರಂ ಗೀತೆ ಪೂರ್ತಿ ಹಾಡುವ ಕುರಿತು ಸದನದಲ್ಲಿ ಚರ್ಚೆ ಮಾಡಲಾಗುತ್ತದೆ. ಇದಕ್ಕಾಗಿ ಸಮಿತಿ ರಚಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ವಂದೇ ಮಾತರಂ ಗೀತೆಯನ್ನು ಪೂರ್ಣವಾಗಿ ಹಾಡಬೇಕೆಂಬ ಪ್ರಸ್ತಾವನೆ ಇಟ್ಟಿದ್ದಾರೆ. ಇದಕ್ಕಾಗಿ ಶಾಸಕರು ಸದನದಲ್ಲಿ ಒತ್ತಾಯಿಸಿದರೆ, ಚರ್ಚೆ ಮಾಡಿ, ಇದಕ್ಕಾಗಿ ಸಮಿತಿ ರಚಿಸಲಾಗುತ್ತದೆ ಎಂದು ಹೇಳಿದರು.

ನಾಡಗೀತೆ ಮತ್ತು ವಂದೇ ಮಾತರಂ ಗೀತೆಯನ್ನು ಪ್ರಾರಂಭಿಸಿದ್ದೇ ಕಾಂಗ್ರೆಸ್. ಕಾಂಗ್ರೆಸ್‌ನವರಿಗೂ ದೇಶಭಕ್ತಿ ಇದೆ. ವಂದೇ ಮಾತರಂ 2 ಚರಣಗಳನ್ನು ಪ್ರಸ್ತುತ ಪಡಿಸಬೇಕೆಂದು ಮುಖ್ಯಮಂತ್ರಿ ಆದೇಶ ನೀಡಿದ್ದಾರೆ. ಸರ್ಕಾರದ ಆದೇಶ ಎಲ್ಲ ಇಲಾಖೆ ಪಾಲಿಸಬೇಕು ಎಂದು ಹೇಳಿದರು.

ತಾವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವುದರಿಂದ ಸರ್ಕಾರದ ನೀತಿ-ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ. ವಂದೇ ಮಾತರಂ ಗೀತೆ ಪೂರ್ಣ ಚರಣ ಹಾಡಬೇಕು ಎಂದು ಸರ್ಕಾರ ಆದೇಶ ನೀಡಿದರೆ ತಮ್ಮದೇನೂ ಅಭ್ಯಂತರ ಇಲ್ಲ, ಶಾಸಕರು ಸದನದಲ್ಲಿ ಈ ಗೀತೆ ಬಗ್ಗೆ ಒತ್ತಾಯಿಸಿದರೆ ಚರ್ಚೆ ಮಾಡಿ ಸಮಿತಿ ರಚಿಸಲಾಗುತ್ತದೆ ಎಂದರು.

ಕಿಷ್ಕಿಂಧೆಯಲ್ಲಿ ಸಂಪುಟ ಸಭೆ: ಈಗಾಗಲೇ ಮುಖ್ಯಮಂತ್ರಿ ಎಲ್ಲ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ನಡೆಯಿತು. ಮುಂದೆ ಜಿಲ್ಲಾವಾರು ಸಚಿವ ಸಂಪುಟ ಸಭೆ ನಡೆಸುವುದಕ್ಕೆ ಚಿಂತನೆ ನಡೆದಿದ್ದು, ಕೊಪ್ಪಳ ಜಿಲ್ಲೆಯ ಕಿಷ್ಕಿಂಧೆ ಪ್ರದೇಶದಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.

ತಾವು ಹಿಂದುಳಿದ ವರ್ಗಗಳ ಸಚಿವರಾದ ಮೇಲೆ ರಾಜ್ಯದಲ್ಲಿ 211 ಬಿಸಿಎಂ ಹಾಸ್ಟೆಲ್ ಮಂಜೂರಿ ಮಾಡಲಾಗಿದೆ. ಇದರಲ್ಲಿ ಅಖಂಡ ಗಂಗಾವತಿ ತಾಲೂಕಿನಲ್ಲಿ 7 ಹಾಸ್ಟೆಲ್‌ಗಳನ್ನು ಮಂಜೂರಿ ಮಾಡಿದೆ ಎಂದರು.

ರೈತರು ನದಿಗೆ ನೀರು ಹರಿಸುವಂತೆ ಕೇಳುತ್ತಿದ್ದಾರೆ. ಅದರಲ್ಲಿ ತಪ್ಪೇನಿಲ್ಲ, ಆದರೆ ಸರಿಯಾದ ಸಮಯಕ್ಕೆ ಮಳೆಯಾಗದ ಕಾರಣ ಜಲಾಶಯ ಭರ್ತಿಯಾಗಿಲ್ಲ. ಆದರೂ ಹಂತ ಹಂತವಾಗಿ 1 ಸಾವಿರದಿಂದ 4 ಸಾವಿರ ಕ್ಯುಸೆಕ್ಸ್ ನೀರು ಬಿಡಲಾಗುತ್ತದೆ ಎಂದರು.

ಶಾಸಕ ಗಾಲಿ ಜನಾರ್ದನ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಸುರೇಶ ಇಟ್ನಾಳ್, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಎಸ್‌ಪಿ ಸಾಹಿಲ್ ಬಾಗ್ಲಾ, ಸಿಇಒ ವರ್ಣಿತ್ ನೇಗಿ, ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಎಸಿ ಮಹಿಬೂಬು ಜಿಲಾನ್, ದೊಡ್ಡಪ್ಪ ದೇಸಾಯಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಇಸ್ಮಾಯಿಲ್ ಖಾದ್ರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಂಪ್ಯೂಟರ್ ತಂತ್ರಜ್ಞರು ವೃತ್ತಿ ಮೌಲ್ಯ ಹೆಚ್ಚಿಸಿಕೊಳ್ಳಲಿ: ರಫೀಕ್‌ಅಹ್ಮದ್ ಅಣ್ಣಿಗೇರಿ
ಅಧಿವೇಶನದಲ್ಲಿ 5 ಅಂಶಗಳ ಬಗ್ಗೆ ಗಮನ ಸೆಳೆಯಲು ಶಾಸಕರಿಗೆ ಆಗ್ರಹ