ಕನ್ನಡಪ್ರಭ ವಾರ್ತೆ ಬೆಳಗಾವಿ
ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಯಶಸ್ಸಿಗೆ ಹಾಗೂ ಪರಿಷತ್ ಕಲಾಪವನ್ನು ರಚನಾತ್ಮಕವಾಗಿ ನಡೆಸಲು ವಿಧಾನ ಪರಿಷತ್ ಸದಸ್ಯರಿಗೆ ಈಗಾಗಲೆ ಅನೇಕ ಸಲಹೆ ನೀಡಲಾಗಿದೆ. ಈ ಬಾರಿ ಪರಿಷತ್‌ನಲ್ಲಿ ಒಟ್ಟು 1397 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಅದರಲ್ಲಿ 150 ಚುಕ್ಕೆ ಗುರುತಿನ ಪ್ರಶ್ನೆಗಳು ಹಾಗೂ 81 ಗಮನ ಸೆಳೆಯುವ ಸೂಚನೆಗಳು ಬಂದಿವೆ ಎಂದು ಹೇಳಿದರು.
ಮೊದಲ ವಾರ ಮಂಗಳವಾರ ಹಾಗೂ ಬುಧವಾರ ಯುಕೆಪಿ, ಮಹಾದಾಯಿ, ರೈತರ ಸಮಸ್ಯೆ, ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತ ಚರ್ಚೆಗಳಿಗೆ ಒತ್ತು ನೀಡಲಾಗುವುದು. ಅಧಿವೇಶನದ ಮಂಗಳವಾರ ಮತ್ತು ಬುಧವಾರ ಪ್ರಶ್ನೋತ್ತರ ವೇಳೆ ನಂತರ ಸಂಪೂರ್ಣ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಪ್ರಾಂತ್ಯಗಳ ಅಭಿವೃದ್ಧಿ ಚಿಂತನೆ ನಡೆಸಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸಲು ಕ್ರಮವಹಿಸಲಾಗುತ್ತಿದ್ದು, ಪರಿಷತ್ ಸದಸ್ಯರ ವೇದಿಕೆ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರಕ್ಕೆ ಸಲಹೆ ನೀಡಲು ಕ್ರಮ ವಹಿಸಲಾಗುವುದು. ಸದನದಲ್ಲಿ ರಚನಾತ್ಮಕ ಚರ್ಚೆಗೆ ಪರಿಷತ್ ಸದಸ್ಯರ ಜತೆ ಈಗಾಗಲೆ ಚರ್ಚಿಸಲಾಗಿದ್ದು, ಸದನ ಸುಗಮವಾಗಿ ನಡೆಯಲು ಅಗತ್ಯ ಕ್ರಮ ವಹಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮೀ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮತ್ತಿತರರು ಉಪಸ್ಥಿತರಿದ್ದರು.