ಒಂದೇ ಭಾರತ ರೈಲು ಬೆಳಗಾವಿಗೆ ವಿಸ್ತರಿಸಲು ಚರ್ಚೆ

KannadaprabhaNewsNetwork |  
Published : Jun 19, 2024, 01:01 AM IST
ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಈರಣ್ಣ ಕಡಾಡಿ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು | Kannada Prabha

ಸಾರಾಂಶ

ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಮಂಗಳವಾರ ಹುಬ್ಬಳ್ಳಿ ನೈಋತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ರೈಲ್ವೆ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಮಂಗಳವಾರ ಹುಬ್ಬಳ್ಳಿ ನೈಋತ್ಯ ರೈಲ್ವೆ ವಿಭಾಗದ ಪ್ರಧಾನ ವ್ಯವಸ್ಥಾಪಕರ ಕಚೇರಿಯಲ್ಲಿ ಪ್ರಧಾನ ವ್ಯವಸ್ಥಾಪಕರು ಹಾಗೂ ಅಧಿಕಾರಿಗಳ ಜೊತೆ ಜಿಲ್ಲೆಯ ರೈಲ್ವೆ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಸಲಾಯಿತು.

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಒಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ಇರುವ ತೊಡಕುಗಳು ಹಾಗೂ ಅದರ ನಿವಾರಣೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆದಷ್ಟು ಬೇಗ ಒಂದೇ ಭಾರತ ರೈಲು ಪ್ರಾರಂಭಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಒತ್ತಾಯಿಸಿದರು.ಧಾರವಾಡ ವ್ಹಾಯಾ ಕಿತ್ತೂರ ಮಾರ್ಗವಾಗಿ ಬೆಳಗಾವಿವರೆಗಿನ ನೂತನ ರೈಲು ಮಾರ್ಗದ ನಿರ್ಮಾಣ ಕಾಮಗಾರಿಯು ನಿಧಾನಗತಿಯಲ್ಲಿ ನಡೆದಿದ್ದು, ತ್ವರಿತಗತಿಯಲ್ಲಿ ಕೈಗೊಳ್ಳಲು ನಿರ್ದೇಶಿಸಲಾಯಿತು. ಬೆಳಗಾವಿ ಮಿರಜ ನಡುವೆ ಈ ಹಿಂದೆ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲುಗಳನ್ನು ಪುನಃ ಪ್ರಾರಂಭಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು, ಪಂಡರಪುರ ಹಾಗೂ ರಾಜಸ್ಥಾನ ಕಡೆಗೆ ತೆರಳುವ ರೈಲುಗಳನ್ನು ಖಾನಾಪುರ, ಘಟಪ್ರಭಾ, ರಾಯಬಾಗ ನಿಲ್ದಾಣಗಳಲ್ಲಿ ನಿಲುಗಡೆಗೆ ಕ್ರಮ ಕೈಕೊಳ್ಳಲು ನಿರ್ದೇಶಿಸಲಾಯಿತು.ಬೆಳಗಾವಿ ಜಿಲ್ಲೆಯು ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಎಲ್ಲ ಸಾರ್ವಜನಿಕರ ಅನುಕೂಲಕ್ಕಾಗಿ ಮುಂಬೈ, ದೆಹಲಿ. ತಿರುಪತಿ, ಮಂಗಳೂರು, ಹೈದ್ರಾಬಾದ, ಬೀದರ ಹಾಗೂ ಸೊಲ್ಲಾಪುರ ನಗರಗಳನ್ನು ಸಂಪರ್ಕಿಸುವ ನೂತನ ರೈಲುಗಳನ್ನು ಪ್ರಾರಂಭಿಸುದಕ್ಕಾಗಿ ಚರ್ಚಿಸಲಾಯಿತು.ಬೆಳಗಾವಿ ರೈಲು ನಿಲ್ದಾಣದ ಪಶ್ಚಿಮದ ಬಾಜು ಪಿಒಬಿ ನಿರ್ಮಾಣ ಮಾಡುವುದು, ಪ್ಲಾಟ್‌ಫಾರ್ಮ್ ನಂಬರ್ 4ರಲ್ಲಿ ಎಕ್ಸಲೇಟರ್ ಅಳವಡಿಸುವುದು, ದೇಸೂರಿನಲ್ಲಿ ಇನ್ನೊಂದು ಫಿಟ್ ಲೈನ್ ಪ್ರಾರಂಭಿಸುವುದು. ಹೀಗೆ ಹಲವು ಅಭಿವೃದ್ಧಿ ಕೆಲಸಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಹುಬ್ಬಳ್ಳಿಯ ನೈಋತ್ಯ ರೈಲ್ವೆ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಅರವಿಂದ್ ಶ್ರೀವಾಸ್ತವ್, ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ, ಪ್ರಧಾನ ವ್ಯವಸ್ಥಾಪಕರ ಆಪ್ತ ಕಾರ್ಯದರ್ಶಿ ಸುನೀಲ ಹಾಗೂ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ