- ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸ್ವೀಕಾರ
ಕನ್ನಡಪ್ರಭ ವಾರ್ತೆ ಜಗಳೂರು
ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ನೌಕರರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸಂಬಂಧಪಟ್ಟ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.ಪಟ್ಟಣದ ಶಾಸಕರ ನಿವಾಸದಲ್ಲಿ ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ನೌಕರರಿಗೆ ಸೌಲಭ್ಯಕ್ಕಾಗಿ ಇದೇ ಆ.12ರಿಂದ ಆರಂಭವಾಗಲಿರುವ ವಿಧಾನ ಸಭೆ ಅಧಿವೇಶನದಲ್ಲಿ ಚರ್ಚಿಸಿ ಸರ್ಕಾರದ ಮತ್ತು ಸಂಬಂಧಪಟ್ಟ ಸಚಿವರ ಗಮನ ಸೆಳೆಯಬೇಕು ಎಂಬ ನೀಡಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
ಈ ವೇಳೆ ರಾಜ್ಯ ದಿನಗೂಲಿ ಕ್ಷೇಮಾಭಿವೃದ್ಧಿ ಸಂಘದ ನೌಕರರ ಅಧ್ಯಕ್ಷ ಕೆಳಗೋಟೆ ಬಸವರಾಜ್ . ತಾಲೂಕು ಅಧ್ಯಕ್ಷ ಬೋರಯ್ಯ, ಗೌರವ ಅಧ್ಯ್ಯಕ್ಷ ಮಲ್ಲಿಕಾರ್ಜುನ್, ರಂಗಪ್ಪ, ಶಾಂತಕುಮಾರ, ಈರಪ್ಪ, ರಾಜಪ್ಪ, ಸೂರಲಿಂಗಪ್ಪ, ಸಣ್ಣಭೀಮಪ್ಪ, ರಾಜಪ್ಪ, ಸೇರಿದಂತೆ ಅನೇಕರು ಇದ್ದರು. - - -
-7ಜೆಎಲ್ಆರ್ಚಿತ್ರ1:ಜಗಳೂರು ಪಟ್ಟಣದ ನಿವಾಸದಲ್ಲಿ ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ದಿನಗೂಲಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.