ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಕನ್ನಡಪ್ರಭ ವಾರ್ತೆ ವಿಧಾನ ಪರಿಷತ್ತು
ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್. ಅರುಣ್ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದರು.
ಸದ್ಯ ಈ ಕಾಯಿಲೆ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಈ ಕಾಯಿಲೆಗೆ ಚಿಕಿತ್ಸೆ ನೀಡಲು ಬಳಸುತ್ತಿದ್ದ ಲಸಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಬೇಸಿಗೆಯಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಈ ಕಾಯಿಲೆ ಕಂಡು ಬರುವುದಿಲ್ಲ. ಲಸಿಕೆ ಇದ್ದರೂ ಬಳಸಲು ಬರುವುದಿಲ್ಲ. ಹೊಸ ಲಸಿಕೆ ಕಂಡು ಹಿಡಿಯಲು ಹೈದರಾಬಾದ್ ಕಂಪನಿಗೆ ಸೂಚಿಸಲಾಗಿದೆ. ಹೀಗಾಗಿ ಸದ್ಯ ಹೊಸ ಲಸಿಕೆ ಲಭ್ಯವಿಲ್ಲ, ಕಳೆದ ಅಕ್ಟೋಬರ್ ತಿಂಗಳಿಂದ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸಲಾಗಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.