ಕನ್ನಡಪ್ರಭ ವಾರ್ತೆ ಮಡಿಕೇರಿ
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ದೃಢಪಟ್ಟಿದೆ. ಅವರ ಬೆಂಬಲಿಗರೇ ಘೋಷಣೆ ಕೂಗಿರುವುದರಿಂದ ನಾಸಿರ್ ಹುಸೇನ್ ರಾಜ್ಯಸಭಾ ಸ್ಥಾನವನ್ನು ಅಲಂಕರಿಸುವ ನೈತಿಕತೆ ಕಳೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಲವು ಸಚಿವರು ವರದಿ ಬರುವ ಮೊದಲೇ ನಾವು ವಿಡಿಯೋ ನೋಡಿದ್ದೇವೆ, ಅದರಲ್ಲಿ ಪಾಕಿಸ್ತಾನದ ಪರ ಯಾವುದೇ ಘೋಷಣೆಗಳನ್ನು ಕೂಗಿಲ್ಲ. ಮಾಧ್ಯಮದವರು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂದು ಜನರ ಹಾದಿ ತಪ್ಪಿಸುವ ಯತ್ನ ಮಾಡಿದ್ದರು. ಒಬ್ಬರು ಸಚಿವರು ಪಾಕ್ ಪರ ಘೋಷಣೆ ಕೂಗಿದ್ದು ಕಾಲ್ಪನಿಕ ಎಂದೆಲ್ಲ ಹೇಳಿಕೆ ನೀಡಿದ್ದರು. ದೇಶದ್ರೋಹದ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಿಂದ ಮಾತನಾಡಿರುವ ಸಚಿವರು ತಕ್ಷಣ ರಾಜ್ಯದ ಜನತೆಯ ಕ್ಷಮೆಯಾಚಿಸಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.ತಮ್ಮ ಸಮ್ಮುಖದಲ್ಲೇ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದರೂ ನಾಸಿರ್ ಹುಸೇನ್ ಪ್ರಕರಣವನ್ನು ಖಂಡಿಸುವ ಪ್ರಯತ್ನ ಕೂಡ ಮಾಡಿಲ್ಲ. ಏನೂ ನಡೆದೇ ಇಲ್ಲ ಎನ್ನುವಂತೆ ವರ್ತಿಸಿರುವುದಲ್ಲದೆ, ಪ್ರಶ್ನೆ ಕೇಳಿದ ಪತ್ರಕರ್ತರನ್ನು ನಿಂದಿಸಿದ್ದಾರೆ. ಆ ಮೂಲಕ ಪ್ರಕರಣ ತಿರುಚಲು ನೋಡಿದ್ದಾರೆ ಎಂದು ಆರೋಪಿಸಿರುವ ಅವರು, ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.