ಹೊನ್ನಾವರ: ಸಾರ್ವಜನಿಕ ಸ್ಥಳದಲ್ಲಿ ತಲವಾರ್ ಪ್ರದರ್ಶಿಸಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಲ್ಲದೆ, ಅದರ ವಿಡಿಯೋವನ್ನು ವಾಟ್ಸಪ್ ಸ್ಟೇಟಸ್‌ನಲ್ಲಿ ಹರಿಬಿಟ್ಟ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಸ್ಥಳೀಯರು ನೀಡಿದ ಪೆನ್‌ಡ್ರೈವ್ ಆಧರಿಸಿ ದೂರು ದಾಖಲಿಸಲಾಗಿದೆ. ಪೆನ್‌ಡ್ರೈವ್‌ನಲ್ಲಿದ್ದ 27 ಸೆಕೆಂಡ್‌ಗಳ ವಿಡಿಯೋವನ್ನು ಪರಿಶೀಲಿಸಿದಾಗ, ಲಕ್ಷ್ಮಿನಾರಾಯಣ ನಾಯ್ಕ ಸಾರ್ವಜನಿಕ ಸ್ಥಳದಲ್ಲಿ ತಲವಾರನ್ನು ಹೆಗಲ ಮೇಲಿಟ್ಟುಕೊಂಡು ಸಾಗುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.
ಅಲ್ಲದೆ, ಬೈಕ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದ ವೇಳೆ ಮಧ್ಯದಲ್ಲಿ ಕುಳಿತಿದ್ದ ಅಜಿತ ಗಜಾನನ ನಾಯ್ಕ ತಲವಾರನ್ನು ರಸ್ತೆಗೆ ಉಜ್ಜಿಕೊಂಡು ಸಾಗಿದ್ದು, ಇದರಿಂದ ರಸ್ತೆಯಲ್ಲಿ ಬೆಂಕಿಯ ಕಿಡಿಗಳು ಚಿಮ್ಮಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇದೇ ವೇಳೆ ವ್ಯಕ್ತಿಯೊಬ್ಬ ಅಶ್ಲೀಲ ಪದಗಳಿಂದ ನಿಂದಿಸುತ್ತಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಹೊನ್ನಾವರ ಪೊಲೀಸ್ ಠಾಣೆಯ ಸಿಬ್ಬಂದಿಯೊರ್ವರಿಗೆ ಸ್ಥಳೀಯರು ನೀಡಿದ ಪೆನ್‌ಡ್ರೈವ್ ಆಧರಿಸಿ ದೂರು ದಾಖಲಿಸಲಾಗಿದೆ.ಈ ಸಂಬಂಧ ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.ಇಂದು ಮುಂಡಗೋಡ್ ಬಂದ್‌ಗೆ ಕರೆ