ಕನ್ನಡಪ್ರಭ ವಾರ್ತೆ, ತುಮಕೂರು
ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಜುಲೈ 12ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ (ಲೋಕ್ ಅದಾಲತ್) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಈ ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.ಜನತಾ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ಭೂಸ್ವಾಧೀನ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ಲೋಕ್ ಅದಾಲತ್ ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಜುಲೈ 12ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.