
ಕನ್ನಡಪ್ರಭ ವಾರ್ತೆ, ತುಮಕೂರು
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ, ತಾಲೂಕು ಹಾಗೂ ಗ್ರಾಮಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕಂದಾಯ ಇಲಾಖೆಯ ವಿವಿಧ ಸೇವೆಗಳ ಪ್ರಗತಿ ಪರಿಶೀಲಿಸಿದರು. ಕಂದಾಯ ಅದಾಲತ್‌ಗಳನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ತಹಸೀಲ್ದಾರ್‌ಗಳಿಗೆ ಈಗಾಗಲೇ ಅಧಿಕಾರ ಪ್ರತ್ಯಾಯೋಜನೆ ಮಾಡಲಾಗಿದೆ. ಸರ್ಕಾರವು ಜಾರಿಗೆ ತಂದಿರುವ ರೆವಿನ್ಯೂ ಮಾಡ್ಯೂಲ್ ತಂತ್ರಾಂಶದ ಮೂಲಕ ಪಹಣಿ ತಿದ್ದುಪಡಿ ಕಾರ್ಯಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಮಕೂರು ಜಿಲ್ಲೆಯಲ್ಲಿ ವಿಷಯ ನಿರ್ವಾಹಕರ ಹಂತದಲ್ಲಿ ಒಟ್ಟು 14,435 ಅರ್ಜಿಗಳು ಬಾಕಿಯಿದ್ದು, ತಿಪಟೂರು, ತುರುವೇಕೆರೆ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಇರುವುದರಿಂದ, ಸದರಿ ಅರ್ಜಿಗಳನ್ನು ತಕ್ಷಣ ಗ್ರಾಮ ಆಡಳಿತಾಧಿಕಾರಿಗಳ ಲಾಗಿನ್‌ಗೆ ಕಳಿಸಿ, ಆರ್‌ಆರ್‌ಟಿ ಶಿರಸ್ತೇದಾರರು ಹಾಗೂ ಎಡಿಎಲ್‌ಆರ್ ಅಧಿಕಾರಿಗಳ ಸಮನ್ವಯದೊಂದಿಗೆ ಆದ್ಯತೆ ಮೇರೆಗೆ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಇ-ಪೌತಿ ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲನೆ ವೇಳೆ, ಜಿಲ್ಲೆಯಲ್ಲಿ ಒಟ್ಟು 3,36,847 ಅರ್ಜಿಗಳು ಬಾಕಿಯಿದ್ದು, ಬಾಕಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಪ್ರತಿಯೊಬ್ಬ ಗ್ರಾಮ ಆಡಳಿತಾಧಿಕಾರಿಯು ಪ್ರತಿದಿನ ಕನಿಷ್ಠ ಎರಡು ಪೌತಿ ಖಾತೆಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದ ಅವರು, ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು. ಈ ಕಾರ್ಯಕ್ರಮಗಳನ್ನು ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಕೈಗೊಳ್ಳುತ್ತಿರುವುದರಿಂದ ಯಾವುದೇ ಲೋಪ ಮತ್ತು ಉದಾಸಿನ ಮನೋಭಾವ ತಾಳದೆ ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಸಭೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು, ಎಲ್ಲಾ ತಾಲ್ಲೂಕು ಹಂತದಲ್ಲಿ ಕಲುಷಿತ ನೀರಿನ ಪರೀಕ್ಷೆ ಕಡ್ಡಾಯವಾಗಿ ನಡೆಸಬೇಕು ಹಾಗೂ ಈ ಪ್ರಕ್ರಿಯೆಯನ್ನು ಮುಂದುವರೆಸುವಂತೆ ಸೂಚಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.