ಸಮಯಕ್ಕೆ ಸರಿಯಾಗಿ ದೂರು ವಿಲೇವಾರಿ ಮಾಡಿ: ಡಿಸಿ

KannadaprabhaNewsNetwork |  
Published : Mar 24, 2024, 01:34 AM IST
23ಕೆಪಿಎಲ್1:ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಲೋಕಸಭೆ ಚುನಾವಣೆ 2024ರ ಹಿನ್ನೆಲೆಯಲ್ಲಿ ಎ.ಆರ್.ಓ.ಗಳು ಮತ್ತು ತಹಶೀಲ್ದಾರರೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿದರು.  | Kannada Prabha

ಸಾರಾಂಶ

ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಗೆ ಸಂಬಂಧಿಸಿದ ಸಿವಿಜಿಲ್ ಗೆ ಬರುವ ದೂರುಗಳನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು.

ಚುನಾವಣೆ ಪ್ರಯುಕ್ತ ಸಭೆಯಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚನೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಲೋಕಸಭೆ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣೆಗೆ ಸಂಬಂಧಿಸಿದ ಸಿವಿಜಿಲ್ ಗೆ ಬರುವ ದೂರುಗಳನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಎ.ಆರ್.ಓ. ಹಾಗೂ ತಹಸೀಲ್ದಾರರಿಗೆ ಸೂಚಿಸಿದರು.

ಲೋಕಸಭೆ ಚುನಾವಣೆ ಹಿನ್ನೆಲೆ ಎ.ಆರ್.ಓ.ಗಳು ಮತ್ತು ತಹಸೀಲ್ದಾರರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾನ ಕೇಂದ್ರಗಳಲ್ಲಿ ಕನಿಷ್ಠ ಸೌಲಭ್ಯಗಳನ್ನು ಒದಗಿಸಬೇಕಾಗಿದ್ದು, ಎಲ್ಲಾ ಮತಗಟ್ಟೆಗಳಿಗೆ ರ‍್ಯಾಂಪ್, ಶೌಚಾಲಯಗಳು, ಕುಡಿಯುವ ನೀರು, ವಿದ್ಯುತ್ ಮತ್ತು ನೆರಳು ಒದಗಿಸಲಾಗಿದೆಯೇ ಎಂದು ಮರು-ಪರಿಶೀಲಿಸಿ ಈ ಎಲ್ಲಾ ಸೌಲಭ್ಯಗಳ ಕುರಿತು ಖಚಿತಪಡಿಸಿಕೊಳ್ಳಬೇಕು. ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆ ಎಲ್ಲಾ ಅನಧಿಕೃತ ರಾಜಕೀಯ ಜಾಹೀರಾತು ತೆಗೆದುಹಾಕಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಚೆಕ್‌ಪೋಸ್ಟ್‌ಗಳ ಮೂಲಕ ಹಾದುಹೋಗುವ ಎಲ್ಲಾ ವಾಹನಗಳನ್ನು ಸರಿಯಾದ ಕಾರ್ಯವಿಧಾನದೊಂದಿಗೆ ಪರಿಶೀಲಿಸಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಎಲ್ಲಾ ಅನುಮತಿಗಳನ್ನು ಏಕ ಗವಾಕ್ಷಿ ಸಮಿತಿಯ ಮೂಲಕ ನೀಡಲಾಗುವುದು. ಅಂತಹ ಎಲ್ಲಾ ಅನುಮತಿಗಳ ಬಗ್ಗೆ ವೀಡಿಯೊ ಕಣ್ಗಾವಲು ತಂಡಗಳಿಗೆ ತಿಳಿಸಬೇಕು ಎಂದು ಹೇಳಿದರು.

ಅಂಚೆ ಮತಪತ್ರಗಳಿಗೆ ಸಂಬಂಧಿಸಿದಂತೆ ಫಾರ್ಮ್ 12ಡಿ ವಿತರಣೆಯ ಪ್ರಾರಂಭ, ಹೋಮ್ ವೋಟಿಂಗ್ ಸೆಕ್ಟರ್ ಮಾರ್ಗ ಯೋಜನೆ, ಮತಗಟ್ಟೆ ಸಿಬ್ಬಂದಿಗಾಗಿ ಮತದಾರರ ಅನುಕೂಲ ಕೇಂದ್ರ, ಪಿವಿಸಿ ಫಾರ್ ಎವಿಇಎಸ್ ಕೆಟಗರಿ ಸೇರಿದಂತೆ ಇತರ ವಿಷಯಗಳ ಬಗ್ಗೆ ತಿಳಿದುಕೊಂಡು ಕ್ರಮ ಕೈಗೊಳ್ಳಬೇಕು. ಉಪ ವಿಭಾಗಾಧಿಕಾರಿಗಳ ಹಂತದಲ್ಲಿ ಸ್ಟ್ರಾಂಗ್ ರೂಂಗಳ ತಯಾರಿ, ಸಿಸಿಟಿವಿ ವ್ಯವಸ್ಥೆ ಹಾಗೂ ಒಂದು ವಿಭಾಗದ ಪೊಲೀಸ್ ಭದ್ರತೆಯನ್ನು ನಿಯೋಜಿಸಬೇಕು. ಇವಿಎಂಗಳು, ವಿವಿಪ್ಯಾಟ್‌ಗಳ ರ‍್ಯಾಂಡಂಮೈಜೆಷನ್ ಮತ್ತು ವಿತರಣೆಗೂ ಕ್ರಮ ಕೈಗೊಳ್ಳಬೇಕು. ಇವಿಎಂಗಳನ್ನು ಪೊಲೀಸ್ ಬೆಂಗಾವಲುವಿನೊಂದಿಗೆ ಜಿಪಿಎಸ್ ಅಳವಡಿಸಿದ ಕಂಟೈನರ್‌ಗಳ ಮೂಲಕ ಮಾತ್ರ ಸಾಗಿಸಬೇಕು. ಎಲ್ಲಾ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ಕಳುಹಿಸುವ ಮೊದಲು ಇಎಂಎಸ್ ಅಪ್ಲಿಕೇಶನ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದರು.

ರಾಷ್ಟ್ರೀಯ ಮತ್ತು ರಾಜ್ಯ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಲಿಖಿತವಾಗಿ ಸೂಚನೆ ನೀಡಬೇಕು. ಇವಿಎಂಗಳು ಮತ್ತು ವಿವಿಪ್ಯಾಟ್‌ಗಳನ್ನು ಸಂಗ್ರಹಿಸಬೇಕು ಮತ್ತು ಸ್ಟ್ರಾಂಗ್ ರೂಮ್‌ಗಳನ್ನು ಅವರ ಉಪಸ್ಥಿತಿಯಲ್ಲಿ ಸೀಲ್ ಮಾಡಬೇಕು. ಇವಿಎಂಗಳನ್ನು ಪ್ರತ್ಯೇಕ ಸ್ಟ್ರಾಂಗ್ ರೂಮ್‌ನಲ್ಲಿ ಇರಿಸಿ, ಈ ಕಾರ್ಯದ ಸಂಪೂರ್ಣ ಪ್ರಕ್ರಿಯೆಯ ವೀಡಿಯೋಗ್ರಾಫಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಮಲ್ಲಪ್ಪ ತೊದಲಬಾಗಿ, ಟಿ.ಎಸ್. ರುದ್ರೇಶಪ್ಪ, ರೇಷ್ಮಾ ಹಾನಗಲ್ ಹಾಗೂ ಅನ್ನಪೂರ್ಣ ಮುದುಕಮ್ಮನವರ ಸೇರಿದಂತೆ ವಿವಿಧ ತಾಲೂಕುಗಳ ತಹಸೀಲ್ದಾರರು, ಜಿಲ್ಲಾ ಚುನಾವಣಾ ಶಾಖೆಯ ತಹಸೀಲ್ದಾರರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಇತರರಿದ್ದರು.23ಕೆಪಿಎಲ್1:

ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಎ.ಆರ್.ಓ.ಗಳು ಮತ್ತು ತಹಸೀಲ್ದಾರರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು