ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಲೂೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ದೂರುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ನಮ್ಮ ಕಚೇರಿಗಳಿಗೆ ನಿಗದಿತ ಸಮಯಕ್ಕೆ ಹಾಜರಾಗಿ, ಕರ್ತವ್ಯ ನಿಮಿತ್ತ ಹೊರ ಹೋಗುವ ವೇಳೆ ಕಡ್ಡಾಯವಾಗಿ ಪುಸ್ತಕದಲ್ಲಿ ದಾಖಲಿಸಬೇಕೆಂದು ಸಲಹೆ ನೀಡಿದರು.
ಇಲಾಖೆಗಳಲ್ಲಿನ ನಗದು ಪುಸ್ತಕಗಳನ್ನು ನಿಯಮಾವಳಿಯಂತೆ ಪಾಲಿಸಬೇಕು. ಸಾರ್ವಜನಿಕ ಅರ್ಜಿಗಳು ಬಂದಾಗ ಇಲ್ಲಸಲ್ಲದ ನೆಪ ಹೇಳಿ ಜನರನ್ನು ಅಲೆದಾಡಿಸಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಅವರ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.ಲೋಕಾಯುಕ್ತ ಇಲಾಖೆಯು ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು, ಭ್ರಷ್ಟಾಚಾರ ನಿಯಂತ್ರಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಲಂಚ ಕೇಳಿದರೆ ದೂರು ನೀಡಬಹುದು. ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಜನರಿಗೆ ಸಕಾಲದಲ್ಲಿ ಸೌಲಭ್ಯ ನೀಡದಿರುವ ವಿರುದ್ಧ ದೂರು ನೀಡಲು ಲೋಕಾಯುಕ್ತಕ್ಕೆ ಅಧಿಕಾರವಿದೆ ಎಂದರು.
ಈ ವೇಳೆ ಲೋಕಾಯುಕ್ತ ಅಧಿಕಾರಿ ಎಂ.ರವಿಕುಮಾರ್, ತಹಸೀಲ್ದಾರ್ ಎಸ್.ವಿ.ಲೋಕೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಕೆ.ಆರ್.ಪೇಟೆ:ಜೆಡಿಎಸ್ ನೂತನ ತಾಲೂಕು ಅಧ್ಯಕ್ಷರಾಗಿ ಟಿಎಪಿಸಿಎಂಎಸ್ ನಿರ್ದೇಶಕ ಮಲ್ಲೇನಹಳ್ಳಿ ಮೋಹನ್ ಅವರನ್ನು ನೇಮಿಸಲಾಗಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದರು.
ಜಿಲ್ಲಾ ಮಟ್ಟಕ್ಕೂ ಅನೇಕ ಪ್ರಾಮಾಣಿಕ ಕಾರ್ಯಕರ್ತರನ್ನು ಪಕ್ಷವು ಗುರುತಿಸಿ ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಇನ್ನೂ ಹಲವು ಹುದ್ದೆಗಳಿದ್ದು ಮುಂದಿನ ದಿನಗಳಲ್ಲಿ ಅವುಗಳನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲಾಗುವುದು ಎಂದರು.