ಕನ್ನಡಪ್ರಭ ವಾರ್ತೆ ಬೀದರ್
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡ ಉತ್ತಮ ಆಡಳಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನ ವಿವಿಧ ಇಲಾಖೆಗಳು ತಳಮಟ್ಟದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಿದಲ್ಲಿ ತಾಲೂಕು ಅಥವಾ ಜಿಲ್ಲಾ ಮಟ್ಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು.
ಸಾರ್ವಜನಿಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಕ್ರಿಯಾಶೀಲರಾಗಿರಬೇಕು. ಅರ್ಜಿಗಳು ಸಲ್ಲಿಕೆಯಾದ ತಕ್ಷಣವೇ ತಮ್ಮ ಮಟ್ಟದಲ್ಲಿ ಪರಿಶೀಲಿಸಿ ಪರಿಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲ ಸಹಾಯ ಸೌಲಭ್ಯಗಳನ್ನು ನಿಗದಿತ ಸಮಯದೊಳಗೆ ಒದಗಿಸಬೇಕು ಎಂದು ತಿಳಿಸಿದರು.ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮಾತನಾಡಿ, ಅಧಿಕಾರಿಗಳು ಸಕಾಲ ಹಾಗೂ ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ಬಾಕಿಯಿರುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಮೊಹಮ್ಮದ ಶಕೀಲ್, ಬೀದರ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಸುರೇಖಾ ಸೇರಿ ಅನೇಕರಿದ್ದರು.