ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

KannadaprabhaNewsNetwork |  
Published : Feb 06, 2025, 11:48 PM IST
ಚಿತ್ರ 6ಬಿಡಿಆರ್‌3ಬೀದರ್‌ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಧ್ಯಕ್ಷತೆಯಲ್ಲಿ ಜರುಗಿತು.

ಕನ್ನಡಪ್ರಭ ವಾರ್ತೆ, ಬೀದರ್‌

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಪುರಸ್ಕಾರ ಯೋಜನೆಗಳು, ಮಕ್ಕಳಾ ರಕ್ಷಣಾ ಸೇವೆಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಪೋಕ್ಸೋ, ಬಾಲ್ಯವಿವಾಹ ನಾಪತ್ತೆ ಇತರೆ ಪ್ರಕರಣಗಳ ಬಗ್ಗೆ ಹೆಚ್ಚಿನ ಗಮಹರಿಸಿ ಕಾರ್ಯ ನಿರ್ವಹಿಸಬೇಕೆಂದರು.ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಪ್ರಧಾನಮಂತ್ರಿ ಮಾತೃವರ್ಧನಾ ಯೋಜನೆಯಡಿ ಕಡ್ಡಾಯವಾಗಿ ಮನೆ ಮನೆ ತೆರಳಿ ಮೊದಲ ಪ್ರಸವ ಗರ್ಭಿಣಿ, ಬಾಣಂತಿ ಫಲಾನುಭವಿಗಳ ನೋಂದಣಿ ಮಾಡಿಕೊಂಡು ಅವರಿಗೆ ತಾಯಿ ಕಾರ್ಡ್‌ ವಿತರಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.ಗೃಹ ಯೋಜನೆಯಡಿ ಕಷ್ಟಕರ ಪರಿಸ್ಥಿತಿಯಲ್ಲಿರುವ ಮಹಿಳೆಯರಿಗೆ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಮಹಿಳೆಯರಿಗೆ ಆಶ್ರಯ, ಆಹಾರ, ಬಟ್ಟೆ, ತರಬೇತಿ ಸೇರಿದಂತೆ ಶಿಕ್ಷಣ ನೀಡುವುದರ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ ಸಶಕ್ತರಾಗುವಂತೆ ನೋಡಿಕೊಳ್ಳಬೇಕು. ಅಂಗನವಾಡಿ ಕೇಂದ್ರ ಗಳಲ್ಲಿ ಮಕ್ಕಳ ತೂಕ, ಎತ್ತರ ಹಾಗೂ ಎಡಗೈ ತೋಳ ಅಳತೆಯ ಮಾಪನ ಮಾಡಿ ಅಪೌಷ್ಠಿಕ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಿ ಈ ಮಕ್ಕಳ ಮೇಲೆ ಹೆಚ್ಚಿನ ನೀಗಾ ವಹಿಸಬೇಕು. ಪೋಷಣ ಅಭಿಯಾನ ಯೋಜನೆಯ 0 ರಿಂದ 6 ವರ್ಷದವರೆಗಿನ ಮಕ್ಕಳು, ಕಿಶೋರಿಯರು, ಗರ್ಭಿಣಿ ಮತ್ತು ಬಾಣಂತಿಯರ ಪೌಷ್ಠಿಕತಾ ಮಟ್ಟವನ್ನು ಸುಧಾರಿಸಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ರಕ್ಷಣಾ ಘಟಕ ವತಿಯಿಂದ ನಡೆಯುವ ವಿವಿಧ ಯೋಜನೆಗಳಾದ ಮಿಷನ್‌ ಶಕ್ತಿ ಯೋಜನೆ, ಒನ್‌ ಸ್ಟಾಪ್‌ ನಂಬರ್‌ ಯೋಜನೆ, ಶಕ್ತಿ ಸದನ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ, ಬಾಲ್ಯ ವಿವಾಹ ಇನ್ನಿತರ ಯೋಜನೆಗಳ ಕುರಿತು ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್‌ ಯೋಜನಾ ಅಧಿಕಾರಿ ಕಿಶೋರ ದುಬೆ, ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂಎಸ್‌ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಾದ ಗುರುರಾಜ, ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು, ಸಂಘ ಸಂಸ್ಥೆ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ