)
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಸರ್ಕಿಟ್ ಹೌಸ್‌ನಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ನಿಗದಿಪಡಿಸಿದ ಬಳಿಕ, ಅದರ ಆಧಾರದ ಮೇಲೆ ಕಾರ್ಖಾನೆಗಳು ರೈತರಿಗೆ ನೀಡಬೇಕಾದ ದರ ನಿರ್ಧರಿಸಲು ಒಪ್ಪಂದದ ಸೂತ್ರ ರೂಪಿಸಲಾಗಿದೆ. ಇನ್ನೆರಡು ದಿನಗಳಲ್ಲಿ ರೈತರು ಹಾಗೂ ಕಾರ್ಖಾನೆ ಮಾಲೀಕರು ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎಂದರು.
ಕಳೆದ ಹತ್ತು ವರ್ಷಗಳಿಂದ ಸಕ್ಕರೆ ಹಾಗೂ ಕಬ್ಬಿನ ಬೆಲೆ ನಿಗದಿಯಲ್ಲಿ ಉಂಟಾಗಿರುವ ಸಮಸ್ಯೆಯೇ ಪ್ರಸ್ತುತ ಬಿಕ್ಕಟ್ಟಿಗೆ ಕಾರಣವಾಗಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರೈತರ ಪರಿಸ್ಥಿತಿ ಅರ್ಥ ಮಾಡಿಕೊಂಡಿದ್ದು, ಬೆಲೆ ನಿಗದಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಕೇಂದ್ರ ನಿಗದಿಪಡಿಸುವ ಬೆಲೆಗೆ ರೈತರು ಒಪ್ಪಿಕೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.ಗ್ರಾಹಕರಿಗೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಪ್ರತ್ಯೇಕ ಸಕ್ಕರೆ ಬೆಲೆ ನಿಗದಿ ಮಾಡುವ ಕುರಿತ ರೈತರ ಬೇಡಿಕೆಯನ್ನೂ ಕೇಂದ್ರದ ಗಮನಕ್ಕೆ ತರಲಾಗುವುದು. ಈ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯ ಸರ್ಕಾರವೂ ಒತ್ತಡ ಹೇರಲಿದೆ. ರೈತರು ಹಾಗೂ ಸಕ್ಕರೆ ಕಾರ್ಖಾನೆಗಳು ಪರಸ್ಪರ ಅವಲಂಬಿತವಾಗಿವೆ. ಕಾರ್ಖಾನೆಗಳಿದ್ದರೆ ರೈತರಿಗೆ ಅನುಕೂಲ, ರೈತರಿದ್ದರೆ ಕಾರ್ಖಾನೆಗಳಿಗೆ ಕಚ್ಚಾ ವಸ್ತು ದೊರೆಯುತ್ತದೆ. ಹೀಗಾಗಿ ಎರಡೂ ಉಳಿಯಬೇಕು. ಕಾರ್ಖಾನೆ ಮಾಲೀಕರು ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕೆಲವು ಕಾರ್ಖಾನೆಗಳನ್ನು ಸರ್ಕಾರವೇ ವಹಿಸಿಕೊಂಡು ನಡೆಸುವಂತೆ ಮಾಲೀಕರು ಮನವಿ ಮಾಡಿದ್ದಾರೆ ಎಂದು ತಿಳಿಸಿದರು.
ರೈತರು ದೇಶದ ದೊಡ್ಡ ಆಸ್ತಿ. ಅವರನ್ನು ಬದುಕಿಸುವುದು ಸರ್ಕಾರದ ಕರ್ತವ್ಯ. ರಾಜ್ಯ ಸರ್ಕಾರ ರೈತರ ಪರವಾಗಿ ನಿಂತು ಕೇಂದ್ರದ ಮೇಲೆ ಒತ್ತಡ ಹೇರಲಿದೆ. ಸರ್ಕಾರದಿಂದ ನೇರವಾಗಿ ಹೆಚ್ಚುವರಿ ನೆರವು ನೀಡುವುದು ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಕಷ್ಟವಾದರೂ, ರೈತರ ಹಿತ ಕಾಪಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ವಿವರಿಸಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಶಾಸಕರು, ರೈತ ಮುಖಂಡರು, ಕಾರ್ಖಾನೆ ಪ್ರತಿನಿಧಿಗಳು, ಸಂಸದರು ಹಾಗೂ ಅಧಿಕಾರಿಗಳು ಮಾತುಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಎಲ್ಲರ ಸಹಕಾರದಿಂದ ಸಮಸ್ಯೆ ಸುಖಾಂತ್ಯದತ್ತ ಸಾಗಿದೆ ಎಂದರು. ಡಿಸೆಂಬರ್‌ನಲ್ಲಿ ಅಧಿವೇಶನ