ವಿಜಯೇಂದ್ರ ಬಿಜೆಪಿ ಅಧ್ಯಕ್ಷ ಆಗಿದ್ದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ

KannadaprabhaNewsNetwork |  
Published : Nov 14, 2023, 01:15 AM ISTUpdated : Nov 14, 2023, 01:16 AM IST
ಸಚಿವ ಶಿವರಾಜ ತಂಗಡಗಿ | Kannada Prabha

ಸಾರಾಂಶ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಗಂಗಾವತಿ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ಬಿಜೆಪಿ ನಾಯಕರಿಗೆ ಅಸಮಾಧಾನ ಉಂಟಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.ತಮ್ಮ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೊದಲಿನಿಂದಲೂ ಭಿನ್ನಮತ ಇದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಹಳಷ್ಟು ಹಿರಿಯ ನಾಯಕರು ಆಕಾಂಕ್ಷಿಯಾಗಿದ್ದರು. ಈಗ ಸಂಘಟನೆ ಮತ್ತು ಬರುವ ಲೋಕಸಭಾ ಚುನಾವಣೆ ಮುಂದಿಟ್ಟುಕೊಂಡು ವಿಜಯೇಂದ್ರ ಅವರನ್ನು ಆಯ್ಕೆ ಮಾಡಿರುವುದಕ್ಕೆ ಹಿರಿಯ ನಾಯಕರಲ್ಲಿ ಅಸಮಾಧಾನ ಉಂಟಾಗಿದೆ. ಇಂದಿಲ್ಲ ನಾಳೆ ಇದು ಸ್ಫೋಟಗೊಳ್ಳುತ್ತದೆ ಎಂದರು.ವಿಧಾನಸಭೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿ ಬರುವ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹೇಗೆ ಗೆಲ್ಲಿಸುತ್ತಾರೆ? ಎಂದು ಪ್ರಶ್ನಿಸಿದರು.ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 25ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ. ತೆಲಂಗಾಣ ಸೇರಿದಂತೆ ಮೂರು ರಾಜ್ಯಗಳಲ್ಲಿ ವಿಧಾನಸಭೆಗೆ ಚುನಾವಣೆಯ ನಡೆಯಲಿದೆ. 7ಕ್ಕೂ ಹೆಚ್ಚು ಕ್ಷೇತ್ರಗಳ ಜವಾಬ್ದಾರಿಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಪ್ರಚಾರ ಕೈಗೊಂಡು ಅಲ್ಲಿಯೂ ಕಾಂಗ್ರೆಸ್ ಸರ್ಕಾರ ಬರಲು ಒಗ್ಗಟ್ಟಾಗಿದ್ದೇವೆ ಎಂದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ