ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.
ಬೆಂಗಳೂರು ಭದ್ರಾವತಿ, ಎನ್‌ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಮತ್ತು ಸಿಟಿ ಬಸ್‌ಗಳು, ಕಾರುಗಳು ಎಂ.ಆರ್.ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‌ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.
ಶಿಕಾರಿಪುರ, ಸೊರಬ, ಅನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷ್ಮೀ ಟಾಕೀಸ್ ಸರ್ಕಲ್, ಪೋಲಿಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.ವಾಹನಗಳ ಸಂಚಾರ, ನಿಲುಗಡೆ ನಿಷೇಧ
* ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯ ಮಾರ್ಗವಾದ ಭೀಮೇಶ್ವರ ದೇವಸ್ಥಾನದಿಂದ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ, ಎ.ಎ.ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ, ಭೀಮೇಶ್ವರ ದೇವಸ್ಥಾನವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.