ಜಿಲ್ಲಾಡಳಿತ ಭವನದಲ್ಲಿ ಮಹಿಳೆಯರಿಂದ ಶಕ್ತಿ ಪ್ರದರ್ಶನ!

KannadaprabhaNewsNetwork |  
Published : Mar 08, 2026, 01:30 AM IST
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ  ಶನಿವಾರಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹಗ್ಗ-ಜಗ್ಗಾಟ | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹಗ್ಗ-ಜಗ್ಗಾಟ, ಲೆಮನ್ ಆ್ಯಂಡ್ ಸ್ಪೂನ್ ಮತ್ತು ಮ್ಯೂಸಿಕಲ್ ಚೇರ್‌ ಇನ್ನಿತರ ಸ್ಪರ್ಧೆಗಳು ನಡೆದವು.

- ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಜಿಲ್ಲಾಡಳಿತದಿಂದ ಹಗ್ಗ-ಜಗ್ಗಾಟ, ರಂಗೋಲಿ, ವಿವಿಧ ಸ್ಪರ್ಧೆಗಳ ಆಯೋಜನೆ

---

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹಗ್ಗ-ಜಗ್ಗಾಟ, ಲೆಮನ್ ಆ್ಯಂಡ್ ಸ್ಪೂನ್ ಮತ್ತು ಮ್ಯೂಸಿಕಲ್ ಚೇರ್‌ ಇನ್ನಿತರ ಸ್ಪರ್ಧೆಗಳು ನಡೆದವು.

ಮಾ.೧೦ರಂದು ನಡೆಯಲಿರುವ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ಮಹಿಳೆಯರು ಬಹಳ ಉತ್ಸುಕತೆಯಿಂದ ಪಾಲ್ಗೊಂಡರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಬೆಳಿಗ್ಗೆ ಆಕರ್ಷಕವಾಗಿ ಬಿಡಿಸಿದ್ದ ರಂಗೋಲಿಯನ್ನು ಜಿಲ್ಲಾಧಿಕಾರಿ ಶ್ರೀರೂಪಾ, ಜಿಲ್ಲಾ ಪಂಚಾಯ್ತಿ ಸಿಇಓ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ವೀಕ್ಷಿಸಿದರು.

ಶ್ರೀರೂಪಾ ಮತ್ತು ಮೋನಾ ರೋತ್‌ ಅವರು ಪ್ರತಿ ಸ್ಪರ್ಧಿಗಳು ಬಿಡಿಸಿದ್ದ ರಂಗೋಲಿಗಳನ್ನು ಆಸಕ್ತಿಯಿಂದ ವೀಕ್ಷಿಸುವುದರ ಜೊತೆಗೆ ರಂಗೋಲಿ ಸ್ಪರ್ಧೆಯ ತೀರ್ಪುಗಾರರಾಗಿಯೂ ಕಾರ್ಯ ನಿರ್ವಹಿಸಿದರು. ಮಹಿಳೆಯರ ರಂಗೋಲಿ ಕಲೆಗೆ ಅತೀವ ಸಂತಸ ವ್ಯಕ್ತಪಡಿಸಿದರು.

ಮಧ್ಯಾಹ್ನದ ವೇಳೆ ಮ್ಯೂಸಿಕಲ್ ಚೇರ್‌, ಹಗ್ಗ-ಜಗ್ಗಾಟ ಲೆಮನ್ ಆ್ಯಂಡ್ ಸ್ಪೂನ್ ಸ್ಪರ್ಧೆಗಳು ನಡೆದವು. ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾ ಖಜಾನೆಯ ಉಪ ನಿರ್ದೇಶಕಿ ರಾಜೇಶ್ವರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್, ಜಿಲ್ಲಾ ಪಂಚಾಯ್ತಿ ಮೌಲ್ಯಮಾಪನ ಅಂದಾಜು ಅಧಿಕಾರಿ ದೀಪಾ, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಸುರೇಶ್‌ ಕುಮಾರ್‌, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ ರಂಗರಾಜು, ಸಿಎಸ್‌ಆರ್‌ ಸಂಯೋಜಕರು ಹಾಗೂ ಪಾಲಿಸಿ ಸಹಹೆಗಾರರಾದ ರಕ್ಷಿತಾ ಸೇರಿ ಇತರರು ಇದ್ದರು.

---

7ಸಿಎಚ್ಎನ್‌18

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರು ಹಗ್ಗಜಗ್ಗಾಟದಲ್ಲಿ ಪಾಲ್ಗೊಂಡರು.

---

7ಸಿಎಚ್ಎನ್‌19

---7ಸಿಎಚ್ಎನ್‌19ಜಿಲ್ಲಾಧಿಕಾರಿ ಶ್ರೀರೂಪಾ, ಜಿಪಂ ಸಿಇಓ ಮೋನಾ ರೋತ್‌, ಎಡಿಸಿ ಟಿ. ಜವರೇಗೌಡ ಅವರು ಮಹಿಳೆಯರು ಬಿಡಿಸಿದ್ದ ರಂಗೋಲಿಗಳನ್ನು ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಪಂಗಳಿಗೆ ಜಿಪಂ ಸಿಇಒ ಭೇಟಿ: ಅಭಿವೃದ್ಧಿ ಪರಿಶೀಲನೆ
ವಿ.ಸಿ.ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ೧೪ರಂದು ಶಂಕುಸ್ಥಾಪನೆ: ಎಚ್‌ಡಿಕೆ