ಕಾರಟಗಿ:
ಪಟ್ಟಣದಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಹಂಚಿಕೆಗೆ ಕೈಗೊಂಡಿರುವ ಕ್ರಮಗಳ ಕುರಿತು ತಾಲೂಕಿನ ಕ್ರಿಮಿನಾಶಕ, ರಸಗೊಬ್ಬರ ಹಾಗೂ ಬೀಜ ಮಾರಾಟಗಾರರ ಸಂಘದ ಪದಾಧಿಕಾರಿಗಳೊಂದಿಗೆ ಮಾತನಾಡಿದರು.
ಉತ್ತಮ ಮಳೆಯಾಗುತ್ತಿದ್ದು ತುಂಗಭದ್ರಾ ಜಲಾಶಯ ಆದಷ್ಟು ಬೇಗ ತುಂಬುವ ಸಾಧ್ಯತೆಯಿದೆ. ಇದು ರೈತರಿಗೆ ವರದಾನವಾಗಲಿದೆ. ರೈತರು ಹೀಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ತಾಲೂಕಿನಲ್ಲಿ ಒಟ್ಟು 32 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಂಗಾರು ಭತ್ತ ನಾಟಿ ಗುರಿ ಹೊಂದಲಾಗಿದೆ ಎಂದರು.31ನೇ ವಿತರಣಾ ನಾಲೆಯ ಕೊನೆ ಭಾಗದ ಟೇಲೆಂಡ್ ಪ್ರದೇಶದಲ್ಲಿ ಮೆಕ್ಕೆಜೋಳ, ತೊಗರಿ ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲು ರೈತರು ಸಿದ್ಧತೆ ಕೈಗೊಳ್ಳಿ. ಕಾರಟಗಿ ಹಾಗೂ ಸಿದ್ದಾಪುರ ರೈತ ಸಂಪರ್ಕ ಕೇಂದ್ರಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸಂಘದ ಉಪಾಧ್ಯಕ್ಷ ವೀರನಗೌಡ, ಪ್ರಧಾನ ಕಾರ್ಯದರ್ಶಿ ಪಂಪನಗೌಡ, ರುದ್ರಗೌಡ ಸೇರಿದಂತೆ ವಿತರಕರು ಇದ್ದರು.