ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸರ್ಕಾರದ ಯೋಜನೆಗಳ ಅನುಷ್ಠಾನ ಫಲಾನುಭವಿಗಳಿಗೆ ನಿಜವಾಗಿಯೂ ಲಾಭವಾಗುತ್ತಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸುವುದು ಅಗತ್ಯವಾಗಿದೆ. ಫಲಾನುಭವಿಗಳ ಮನೆಗೆ ಭೇಟಿ ನೀಡಿ ಅವರಿಂದ ನೇರ ಪ್ರತಿಕ್ರಿಯೆ ಪಡೆದು ವರದಿ ತಯಾರಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಹೇಗೆ ನಡೆಯುತ್ತಿದೆ ಎಂಬುದರ ಸಮಗ್ರ ತನಿಖೆ ನಡೆಸಿ, ಅದರ ಬಗ್ಗೆ ಸ್ಪಷ್ಟ ವರದಿ ಸಿದ್ಧಪಡಿಸಬೇಕು ಎಂದರು.
ತೊಗರಿ ಮತ್ತು ಕಡಲೆ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದ್ದರೂ ಖರೀದಿ ಕೇಂದ್ರಗಳಲ್ಲಿ ಸಾಕಷ್ಟು ಸಮಸ್ಯೆ ಉಂಟಾಗುತ್ತಿವೆ. ರೈತರ ಗೋಳು ಅರ್ಥ ಮಾಡಿಕೊಂಡು ಸಮಸ್ಯೆ ಪರಿಹರಿಸಿ ಎಂದರು. ಕುಡಿಯುವ ನೀರಿನ ಪೈಪುಗಳ ಗುಣಮಟ್ಟದ ಮೇಲೆ ಅಧಿಕಾರಿಗಳು ಗಮನ ಹರಿಸಿಬೇಕು. ವಿಶೇಷೆವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೈಪುಗಳ ಅಳವಡಿಕೆ ಮತ್ತು ಅವುಗಳ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕಾಗಿದೆ. ಪೈಪು ಅಳವಡಿಕೆ ವೇಳೆ ರಸ್ತೆ ತೆಗೆಯಲಾಗುತ್ತದೆ. ಅದನ್ನು ತಕ್ಷಣ ಮುಚ್ಚುವ ಕ್ರಮ ಕೈಗೊಳ್ಳಬೇಕು ಎಂದು ಅವರು, ಕೃಷಿ, ಗ್ರಾಮೀಣ ಕುಡಿಯುವ ನೀರು, ಮತ್ತು ಸರ್ಕಾರಿ ಯೋಜನೆಗಳ ಪ್ರಾಮಾಣಿಕ ಕಾರ್ಯನಿರ್ವಹಣೆಗೆ ಸೂಕ್ತ ತೀರ್ಮಾನಗಳು ಕೈಗೊಳ್ಳಲು ಈ ಸಭೆ ಒಳ್ಳೆಯ ವೇದಿಕೆಯಾಗಿದೆ ಎಂದು ಹೇಳಿದರು.